

ವಾಡಿ: ಕಲಬುರಗಿಯಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರಿಡಾಕೂಟದಲ್ಲಿ ಭಾಗವಹಿಸಿದ ಪಟ್ಟಣದ ಮುರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸುಶ್ಮಿತಾ ತಂದೆ ರಮೇಶ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಯ ಕೀರ್ತಿ ಹೆಚ್ಚಿಸಿದ್ದಾಳೆ.
800 ಮೀ ರನ್ನಿಂಗ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನಗಳಿಸುವ ಮೂಲಕ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಎಂದು ಪ್ರಾಂಶುಪಾಲಕ ಶಂಕರ ರಾಠೋಡ ತಿಳಿಸಿದರು.
ವಿದ್ಯಾರ್ಥಿನಿ ಸಾಧನೆಗೆ ದೈಹಿಕ ಶಿಕ್ಷಕ ಶಂಕರಲಿಂಗ ಕೊರೆ, ಚಿತ್ರಕಲಾ ಶಿಕ್ಷಕ ವಿಶ್ವನಾಥ ರಾಠೋಡ್, ನಿಯಲಪಾಲಕ ಅಶೋಕ ಚವ್ಹಾಣ್ ಹಾಗೂ ಸಹ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.