ವಾಘವಾಡೆ ಗ್ರಾಮದಲ್ಲಿ ನಾಡ ಪಿಸ್ತೂಲ್ ಪತ್ತೆ

Nada pistul 13 FEB 20
Published on

ಬೆಳಗಾವಿ: ತಾಲೂಕಿನ ವಾಘವಾಡೆ ಗ್ರಾಮದಲ್ಲಿ ನಾಡ(ಕಂಟ್ರಿ) ಪಿಸ್ತೂಲ್ ಪತ್ತೆಯಾಗಿವೆ. ಪಿಸ್ತೂಲ್ ಪತ್ತೆಯಾದ ಬೆನ್ನಲ್ಲೇ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿಕೊಂಡು ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ. ಗ್ರಾಮದ ಕಸ ಎಸೆಯುವ ಸ್ಥಳದಲ್ಲಿ 4 ಕಂಟ್ರಿ ಪಿಸ್ತೂಲ್ ಪತ್ತೆಯಾಗಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಾನಾ ರೀತಿ ಚರ್ಚೆಗಳು ನಡೆಯುತ್ತಿದ್ದವು. ಹಾಗಾಗಿ ಪೊಲೀಸರು ಆಯುಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ವಿಶೇಷ ತಂಡ ರಚಸಿ ತನಿಖೆ ಕೈಗೊಂಡಿದ್ದಾರೆ. ಪತ್ತೆಯಾಗಿರುವ ಪಿಸ್ತೂಲ್‌ಗಳು ಸಂಪೂರ್ಣ ತುಕ್ಕು ಹಿಡಿದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಘವಾಡೆ ಗ್ರಾಮದಲ್ಲಿ ಪತ್ತೆಯಾಗಿರುವ ಕಂಟ್ರಿ ಪಿಸ್ತೂಲ್‌ಗಳ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ತನಿಖೆಯ ಬಳಿಕ ನಿಖರ ಮಾಹಿತಿ ಲಭ್ಯವಾಗಲಿದೆ. | ಬಿ.ಎಸ್.ಲೋಕೇಶಕುಮಾರ್ ನಗರ ಪೊಲೀಸ್ ಆಯುಕ್ತರು ಬೆಳಗಾವಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net