ಕೂಲಿ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ- ಎಂಎಲ್‌ಸಿ ಮಹಾಂತೇಶ ಕವಟಗಿಮಠ

Mhantesh Kavatgimath
Published on

ಅಥಣಿ: ಕೂಲಿ ಕಾರ್ಮಿಕರು, ಬಡವರು ತಮ್ಮ ಊರುಗಳಿಗೆ ನಡೆದುಕೊಂಡು ಹೋಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಅಂತಹ ಜನರಿಗೆ ಊಟ ಮತ್ತು ವಸತಿ ವ್ಯವಸ್ಥೆ ಮಾಡಲು ಪ್ರಧಾನಿ ಮೋದಿ ಆದೇಶಿಸಿದ್ದು, ಸ್ಥಳೀಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ಎಂಎಲ್‌ಸಿ ಮಹಾಂತೇಶ ಕವಟಗಿಮಠ ಹೇಳಿದರು.

ಲಾಕ್‌ಡೌನ್ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ, ಸೂಚನೆ ನೀಡಿದ ಅವರು, ಮಹಾರಾಷ್ಟ್ರದ ಸಾಂಗ್ಲಿ, ಪುಣೆ, ಮುಂಬೈ ನಗರಗಳಿಂದ ಜನ ಬರುತ್ತಿದ್ದು, ಅವರನ್ನು ಒತ್ತಾಯ ಪೂರ್ವಕವಾಗಿ ಕಳುಹಿಸಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯ ಮತ್ತು ಸಲಕರಣೆ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.

ಸರ್ಕಾರ ಪರಿಸ್ಥಿತಿ ನಿಯಂತ್ರಣ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದೆ. ನಿತ್ಯ ಬಳಕೆಯ ವಸ್ತುಗಳನ್ನು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಿದರೆ ಅಂತಹ ವ್ಯಾಪಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಹಸೀಲ್ದಾರ್ ದುಂಡಪ್ಪ ಕೋಮಾರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net