ವಕ್ಪ್ ಭೂಕಬಳಿಕೆ ಸರ್ಕಾರದ ಕಣ್ಣು ಮುಚ್ಚಾಲೆ ಆಟ

New Joshi 1
Published on

ಹುಬ್ಬಳ್ಳಿ : ವಕ್ಪ್ ಭೂಕಬಳಿಕೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಕಣ್ಣು ಮುಚ್ಚಾಲೆ ಆಡವಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಾವೇರಿ ಜಿಲ್ಲಾ ಪಂಚಾಯಿತಿ ಸಿಇಒ ಎರಡು ದೇವಸ್ಥಾನಗಳ ಸ್ವಾಧೀನಕ್ಕೆ ವಕ್ಪ್ ಸಮಿತಿಗೆ ಆದೇಶ ನೀಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರ ಜಮೀನು, ದೇವಸ್ಥಾನಗಳ ಆಸ್ತಿ ಕಬಳಿಸಲು ವಕ್ಪ್ ಬೋರ್ಡ್ ಅಧಿಕಾರಿಗಳ ನೆರಳಿನಲ್ಲಿ ಸಂಚು ರೂಪಿಸಿರುವುದು ಇದರಿಂದ ಮತ್ತೆ ಸಾಬೀತಾಗಿದೆ ಎಂದು ಕಿಡಿ ಕಾರಿದರು.

ರೈತರ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೋಟಿಸ್ ಹಿಂಪಡೆಯುತ್ತೇವೆ ಎಂದಿದ್ದಾರೆ. ಇತ್ತ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತೂ ವಕ್ಪ್ ಬೋರ್ಡ್​ಗೆ ಅನುಕೂಲಕರ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಇದು ಸರ್ಕಾರದ ಕಣ್ಣು ಮುಚ್ಚಾಲೆ ಆಟವಲ್ಲವೇ? ಎಂದು ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net