ವಕ್ವಾಡಿ ಗುರುಕುಲ ಪದವಿಪೂರ್ವ ಕಾಲೇಜು

gan (4)
Published on

ಕುಂದಾಪುರ: ಪ್ರತಿಯೊಬ್ಬ ಮನುಷ್ಯನ ಬದುಕಿನಲ್ಲಿ ಶಿಕ್ಷಕನ ಪಾತ್ರ ಮಹತ್ವದ್ದು. ನಮ್ಮೊಳಗಿನ ಅಂಧಕಾರವನ್ನು ಕಳೆದು ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಿ ಬಾಳುವುದಕ್ಕೆ ಕಾರಣಿಭೂತರಾದವರು ಶಿಕ್ಷಕರು ಎಂದು ಬಾಂಡ್ಯ ಎಜುಕೇಶನ್ ಟ್ರಸ್ಟ್‌ನ ಜಂಟಿ ಮ್ಯಾನೇಜಿಂಗ್ ಟ್ರಸ್ಟಿ ಅನುಪಮಾ ಎಸ್.ಶೆಟ್ಟಿ ಹೇಳಿದರು.

ವಕ್ವಾಡಿಯ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲೆ ಡಾ.ರೂಪಾ ಶೆಣೈ ಮಾತನಾಡಿ, ಶಿಕ್ಷಕ ವೃತ್ತಿ ಸರ್ವರೂ ಆದರಿಸಿ ಗೌರವಿಸುವ ವೃತ್ತಿಯಾಗಿದೆ. ಶಿಕ್ಷಕ ನಿಸ್ವಾರ್ಥಿಯಾಗಿ, ಕಾರ್ಯದಕ್ಷತೆಯೊಂದಿಗೆ ತನ್ನ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕು ಎಂದರು. ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ವಿದ್ಯಾರ್ಥಿನಿಯರಾದ ಪ್ರಜನ್ಯಾ ಸ್ವಾಗತಿಸಿದರು. ಶಿಲ್ಪಾ ಕಾರ್ಯಕ್ರಮ ನಿರೂಪಿಸಿದರು. ಕೃತಿಶ್ರೀ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net