ಪೌಷ್ಟಿಕ ಆಹಾರ ಪದ್ಧತಿ ಆರೋಗ್ಯಕ್ಕೆ ಪೂರಕ

heart
ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಹೃದಯಕ್ಕಾಗಿ ನಡಿಗೆ ಕಾರ್ಯಕ್ರಮವನ್ನು ಕಾರ್ಕಳದ ಖ್ಯಾತ ಲೆಕ್ಕಪರಿಶೋಧಕ ಕೆ.ಕಮಲಾಕ್ಷ ಕಾಮತ್ ಉದ್ಘಾಟಿಸಿದರು
Published on

ಕಾರ್ಕಳ: ಜೀವನದಲ್ಲಿ ನಗು ಮತ್ತು ಪೌಷ್ಟಿಕ ಆಹಾರ ಪದ್ದತಿ ಸರ್ವತೋಮುಖ ಆರೋಗ್ಯಕ್ಕೆ ಪೂರಕ ಎಂದು ಕಾರ್ಕಳ ತಹಸೀಲ್ದಾರ್ ಡಾ.ಪ್ರತಿಭಾ ಆರ್. ಹೇಳಿದರು. ಕಾರ್ಕಳದಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಹೃದಯಕ್ಕಾಗಿ ನಡಿಗೆ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು.

ಕಾರ್ಕಳದ ಲೆಕ್ಕಪರಿಶೋಧಕ ಕೆ.ಕಮಲಾಕ್ಷ ಕಾಮತ್ ಅನಂತಶಯನ ವೃತ್ತದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಶ್ವ ಹೃದಯ ದಿನದ ಮಹತ್ವ ಮತ್ತು ಉತ್ತಮ ಹೃದಯ ಆರೋಗ್ಯಕ್ಕಾಗಿ ಪಾಲಿಸಬೇಕಾದ ಆಹಾರ ಕ್ರಮ ಮತ್ತು ವ್ಯಾಯಾಮ ಚಟುವಟಿಕೆಗಳ ಕುರಿತು ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್ ಮಾತನಾಡಿದರು.

ರೋಟರಿ ಮಾಜಿ ಜಿಲ್ಲಾ ಗವರ್ನರ್ ಡಾ.ಭರತೇಶ್ ಆದಿರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಸಂದೀಪ್ ಕುಡ್ವ, ಕೆಎಂಸಿ ಮಂಗಳೂರಿನ ಹೃದ್ರೋಗ ತಜ್ಞ ಡಾ.ದಿತೇಶ್, ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ ಪ್ರಭಾರ ಮುಖ್ಯ ವೈದ್ಯಾಧಿಕಾರಿ ಡಾ.ಸಂಜಯ್, ರೋಟರಾಕ್ಟ್ ಕ್ಲಬ್ ಅಧ್ಯಕ್ಷೆ ಅಕ್ಷಿತಾ ಶೆಟ್ಟಿಗಾರ್ ಉಪಸ್ಥಿತರಿದ್ದರು. ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷ ಉಪೇಂದ್ರ ವಾಗ್ಲೆ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಶಾಂತ್ ಜೈನ್ ವಂದಿಸಿದರು. ರಾಜೇಶ್ ಕುಂಟಾಡಿ ಮತ್ತು ಅನುಷಾ ಪ್ರಭು ಕಾರ್ಯಕ್ರಮ ನಿರೂಪಿಸಿದರು. ನಡಿಗೆಯು ಕಾರ್ಕಳ ಮುಖ್ಯರಸ್ತೆಯಲ್ಲಿ ಸಾಗಿ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಸಂಪನ್ನಗೊಂಡಿತು. ಕಾರ್ಕಳ ಪರಿಸರದ ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖೆಯ ನೌಕರರು, ವಿವಿಧ ಸಂಘ ಸಂಸ್ಥೆಗಳು ಜಾಥಾದಲ್ಲಿ ಭಾಗವಹಿಸಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net