ಬೆಳ್ತಂಗಡಿಯಿಂದ ವಿಧಾನಸೌಧದವರೆಗೆ ಪಾದಯಾತ್ರೆ

PROTEST
Published on

ದೌರ್ಜನ್ಯಕ್ಕೊಳಗಾಗಿ ಕೊಲೆಯಾದ ಸೌಜನ್ಯಾಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿ ಆ.26ರಂದು ಧರ್ಮಸ್ಥಳ ಬಳಿಯ ಬೆಳ್ತಂಗಡಿಯಿಂದ ಬೆಂಗಳೂರಿನ ವಿಧಾನಸೌಧದವರೆಗೆ ಕೆಆರ್‌ಎಸ್ ಪಕ್ಷದ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾ ಉಪಾಧ್ಯಕ್ಷ ಡಿ.ಪಿ.ಕೆ. ಪರಮೇಶ್ ತಿಳಿಸಿದರು.

ಆ.26 ರಂದು ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ನೇತೃತ್ವದಲ್ಲಿ ಪಾದಯಾತ್ರೆ ಹೊರಡಲಿದೆ. ಇದರಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಸದಸ್ಯರು ಹಾಗೂ ಸಾರ್ವಜನಕರು ಪಾಲ್ಗೊಳ್ಳಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

2012ರಲ್ಲಿ ಸೌಜನ್ಯಾಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ನಿರಪರಾಧಿಯನ್ನು ಆರೋಪಿಯನ್ನಾಗಿಸಿ, ನಂತರ ಬಿಡುಗಡೆ ಮಾಡಲಾಗಿದೆ. ಆದರೆ ನಿಜವಾದ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ. ಹೀಗಾಗಿ ಪಾದಯಾತ್ರೆ ಮೂಲಕ ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹೇರಲು ಈ ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು.


ಪದಾಧಿಕಾರಿಗಳಾದ ಶ್ರೀವಾರಿ ನಾಗರಾಜ್, ಮ.ಸ.ಪ್ರವೀಣ್, ರಾಜೇಂದ್ರ, ನಾಗೇಂದ್ರ, ತಿಮ್ಮಾಬೋವಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net