ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಜುಲೈ 20 ರಂದು ಬೆಳಗ್ಗೆ 10.30 ರಿಂದ 1.30 ಗಂಟೆಯವರೆಗೆ ವಾಕ್ ಇನ್ ಇಂಟರ್ವ್ಯೂವ್ ಆಯೋಜಿಸಲಾಗಿದೆ. ಇಂಟರ್ವ್ಯೂವ್ನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಬಿಇ ಎಲೆಕ್ಟ್ರಿಕ್, ಡಿಪ್ಲೋಮಾ ಟೂಲ್ ಡೈ ಮೇಕಿಂಗ್ (ಬಿ.ಇ ಮಾಡಿದವರಿಗೆ ಆದ್ಯತೆ), ಎಂ.ಎಸ್ಸಿ ಗಣಿತಶಾಸ್ತ್ರ ವಿದ್ಯಾರ್ಹತೆ ಹೊಂದಿದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡೆಟಾ ಹಾಗೂ ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್ವ್ಯೂವ್ನಲ್ಲಿ ಭಾಗವಹಿಸಬಹುದು.
ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.