

ಮೈಸೂರು: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಂಚಾರ ನಿಯಮದ ಬಗ್ಗೆ ಅರಿವು ಮೂಡಿಸಲು ನಗರ ಪೊಲೀಸರಿಂದ ವಾಕಥಾನ್ ಆಯೋಜಿಸಲಾಗಿತ್ತು.
ನಗರದ ಕೋಟೆ ಅಂಜನೇಯಸ್ವಾಮಿ ದೇವಸ್ಥಾನದಿಂದ ಆರಂಭಗೊಂಡ ವಾಕಥಾನ್, ಕೆ.ಆರ್.ವೃತ್ತ, ಸಯ್ಯಜಿರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಆರ್‌ಎಂಸಿ ವೃತ್ತ, ಬಂಬೂ ಬಜಾರ್, ಹೈವೇ ಸರ್ಕಲ್ ಮೂಲಕ ಬನ್ನಿಮಂಟಪ ಮೈದಾನದಲ್ಲಿ ಅಂತ್ಯಗೊಂಡಿತು.
ನಗರ ಪೊಲೀಸ್ ಕಮೀಷನರ್ ಕೆ.ಟಿ. ಬಾಲಕೃಷ್ಣ ಚಾಲನೆ ನೀಡಿದರು. ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಬಿ.ಟಿ. ಕವಿತಾ, ಸಿಎಆರ್ ಡಿಸಿಪಿ ಚನ್ನಯ್ಯ, ಕೆಎಆರ್‌ಪಿ ಮೌಂಟೆಡ್ ಕಮಾಂಡೆಂಟ್ ನಾಗರಾಜು, ಸಂಚಾರ ವಿಭಾಗದ ಎಸಿಪಿ ಎಸ್.ಎನ್. ಸಂದೇಶ್ ಕುಮಾರ್, ನಗರದ ಎಲ್ಲ್ಲ ಸಂಚಾರ ಪೊಲಿಸ್ ಠಾಣೆಗಳ ಪೊಲೀಸ್ ಅಧಿಕಾರಿ, ಸಿಬ್ಬಂದಿ ಭಾಗವಹಿಸಿದ್ದರು.