ಎಣ್ಣೆಗಾಗಿ ನಡೀತು ಬಾರ್ ಮುಂದೆ ಮಾರಾಮಾರಿ

Alcohol (1)
Published on

ಶಿವಮೊಗ್ಗ: ನಗರದ ಬಿಎಚ್ ರಸ್ತೆಯ ಬಾರ್‌ವೊಂದರ ಮುಂದೆ ಮದ್ಯ ಕೊಡಲಿಲ್ಲ ಎಂಬ ಕಾರಣಕ್ಕೆ ಬಾರ್ ಸಿಬ್ಬಂದಿ ಮೇಲೆ ಯುವಕರು ಹಲ್ಲೆ ನಡೆಸಿದ್ದು ಇಬ್ಬರು ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ 11.30ರ ಸುಮಾರಿಗೆ ಬಂದ ಯುವಕರು ಬಾರ್ ಸಿಬ್ಬಂದಿಗೆ ಮದ್ಯ ಕೊಡುವಂತೆ ಕೇಳಿದ್ದಾರೆ. ಬಾರ್ ಸಮಯ ಮುಗಿದಿದ್ದು ಮದ್ಯ ಕೊಡಲು ಆಗಲ್ಲ ಎಂದು ಸಿಬ್ಬಂದಿ ಹೇಳಿದ್ದಾರೆ. ಇದರಿಂದ ಸಿಟ್ಟಾದ ಯುವಕರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ರಸ್ತೆಯಲ್ಲಿ ಅಟ್ಟಾಡಿಸಿ ಹ¯್ಲೆ ಮಾಡಿz್ದÁರೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸದ್ಯ ವಾಟ್ಸ್ಆ್ಯಪ್‌ಗಳಲ್ಲಿ ಹರಿದಾಡುತ್ತಿದೆ. ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net