Waqf property dispute ನಮ್ಮ ಭೂಮಿ ನಮ್ಮ ಹಕ್ಕು ಹೋರಾಟ ನವೆಂಬರ್‌ 21 ಕ್ಕೆ

Waqf property dispute
Published on

ಕಾರವಾರ: ರೈತರ ಜಮೀನನ್ನು ಸರ್ಕಾರ ವಕ್ಫ್‌ ಮಂಡಳಿಗೆ ಹಸ್ತಾಂತರ ಮಾಡುತ್ತಿರುವುದನ್ನು ಖಂಡಿಸಿ, Waqf property dispute ಸಂಬಂಧ ನಮ್ಮ ಭೂಮಿ ನಮ್ಮ ಹಕ್ಕು ಎಂಬ ಘೋಷವಾಕ್ಯದೊಂದೊಂದಿಗೆ ನ. 21 ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಯಿಂದ ಧರಣಿ ನಡೆಸಲಾಗುವುದು ಎಂದು ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಓಲೈಕೆ ರಾಜಕಾರಣ, ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ರೈತರಿಗೆ ಅನ್ಯಾಯವಾಗುತ್ತಿದ್ದರೂ ಇನ್ನೊಂದೆಡೆ ಭೂ ಕಬಳಕೆ ಮುಂದುವರಿಸಿದೆ. ಅರಣ್ಯ ಭೂಮಿ ವಕ್ಫ್‌ ಪಾಲಾಗುತ್ತಿದ್ದರೂ ಅರಣ್ಯ ಇಲಾಖೆ ನಿಸ್ಸಹಾಯಕವಾಗಿದೆ. ಸಾವಿರಾರು ವರ್ಷಗಳಿಂದ ಕೃಷಿ, ಜೀವನ ಮಾಡಿಕೊಂಡು ಬಂದ ಹಿಂದುಗಳ ಮನೆ, ಮಠ, ದೇವಾಲಯಗಳು ಇಂದು ಅಸುರಕ್ಷಿತವಾಗಿವೆ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ರೈತರು, ಮಠಾಧೀಶರು, ಸಾರ್ವಜನಿಕರೊಂದಿಗೆ ಸೇರಿಕೊಂಡು ಪ್ರತಿಭಟನೆ ನಡೆಸಲಿದೆ ಎಂದರು.

Waqf property dispute ಜಿಲ್ಲೆಗೂ ಬರಲಿದೆ ತಂಡ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರಶಾಂತ ನಾಯಕ ಮಾತನಾಡಿ, ವಕ್ಪ ಹಗರಣ ಬಯಲು ಮಾಡಲು ಬಿಜೆಪಿ ರಾಜ್ಯ ಹಾಗೂ ಕೇಂದ್ರದಿಂದ ತಲಾ ಮೂರು ತಂಡಗಳನ್ನು ನೇಮಿಸಲಾಗಿದ್ದು ಆ ಸಮಿತಿ ಜಿಲ್ಲೆಗೂ ಭೇಟಿ ನೀಡಲಿದೆ. ಜಿಲ್ಲಾದ್ಯಂತ ಕಾರ್ಯಕರ್ತರು ರೈತರು ಸಾರ್ವಜನಿಕರು ಮಠ ಪ್ರಮಖರಿಂದ ಅಹವಾಲು ಸ್ವೀಕರಿಸಲಿದೆ ಎಂದರು.  Waqf property dispute ಸಂಬಂಧ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಬೃಹತ್ ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದೆ ಎಂದರು. ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ರಾಜೇಂದ್ರ ನಾಯ್ಕ, ಗ್ರಾಮೀಣ ಮಂಡಲದ ಅಧ್ಯಕ್ಷ ಸುಭಾಷ್ ಗುನಾಗಿ, ನಗರ ಮಂಡಳ ಅಧ್ಯಕ್ಷ ನಾಗೇಶ ಕುರ್ಡೇಕರ್, ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ್, ಮಾಧ್ಯಮ ವಕ್ತಾರ ಜಗದೀಶ ನಾಯಕ ಮೊಗಟಾ, ಸಾಮಾಜಿಕ ಮಾಧ್ಯಮ ಪ್ರಮುಖ ಕಿಶನ್ ಕಾಂಬಳೆ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಜಾತಾ ಬಾಂದೇಕರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net