ಯುದ್ಧ ಸ್ಮಾರಕದ ಅಭಿವೃದ್ಧಿ ಕಾಮಗಾರಿಗೆ ಚಾಲನೆ

mng-july17-kpt1
Published on



ಮಂಗಳೂರು : ಮಂಗಳೂರು ನಗರ ದಕ್ಷಿಣದ ಶಾಸಕ ಡಿ.ವೇದವ್ಯಾಸ ಕಾಮತ್ ಅವರ 25 ಲಕ್ಷ ರೂ.ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ನಗರದ ಕದ್ರಿ ಉತ್ತರ ವಾರ್ಡ್‌ನಲ್ಲಿರುವ ಯುದ್ಧ ಸ್ಮಾರಕದ ಅಭಿವೃದ್ಧಿ ಕಾಮಗಾರಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಬುಧವಾರ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭ ಸಚಿವರು ಮಾತನಾಡಿ ದೇಶ ಕಾಯುವ ಹುತಾತ್ಮ ಯೋಧರ ನೆನಪಿಗಾಗಿ ನಿರ್ಮಿಸಲಾಗಿದ ಯುದ್ಧ ಸ್ಮಾರಕದ ಅಭಿವೃದ್ಧಿ ಮಾಡುವ ಭಾಗ್ಯ ಈ ಭಾಗದ ಜನಪ್ರತಿನಿಧಿಗಳಿಗೆ ಸಿಕ್ಕಿರುವುದು ಪುಣ್ಯ ಕಾರ್ಯ. ಯುದ್ದ ಸ್ಮಾರಕದ ಅಭಿವೃದ್ಧಿಗೆ ನಾನು ಕೂಡಾ ನನ್ನ ಒಂದು ತಿಂಗಳ ವೇತನವಾದ 1 ಲಕ್ಷ ರೂ. ಈ ಪುಣ್ಯ ಕಾರ್ಯಕ್ಕೆ ಸಮರ್ಪಿಸುತ್ತೇನೆ ಎಂದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಸೈನಿಕರು ಈ ದೇಶದ ಹೆಮ್ಮೆ. ಅವರ ತ್ಯಾಗಕ್ಕೆ ಎಂದಿಗೂ ಸಾಟಿಯಿಲ್ಲ. ಅವರನ್ನು ಗೌರವಿಸುವುದು ನಮ್ಮೆಲ್ಲರ ಜವಾಬ್ದಾರಿ. ಈ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಶೀಘ್ರದಲ್ಲಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳಲಾಗುವುದು ಎಂದರು.
ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜಾ, ಎಂಎಲ್‌ಸಿ ಮಂಜುನಾಥ ಭಂಡಾರಿ, ಮಾಜಿ ಎಂಎಲ್‌ಸಿ ಕ್ಯಾ.ಗಣೇಶ್ ಕಾರ್ಣಿಕ್. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಶ್ರೀಕಾಂತ್, ಮನಪಾ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net