23 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಬಂಧನ

mng--23 March Azaruddin
Published on

ಮಂಗಳೂರು: ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟು ಇದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.


ಕಾಟಿಪಳ್ಳ ಗ್ರಾಮದ ಕೃಷ್ಣಾಪುರ ಝೀನತ್ ಮಂಜಿಲ್ ನಿವಾಸಿ ಅಜರುದ್ಧೀನ್ (29) ಬಂಧಿತ. ಕೊಣಾಜೆ, ಉಳ್ಳಾಲ, ಸುರತ್ಕಲ್, ಬಜ್ಪೆ, ಬರ್ಕೆ, ಬಂಟ್ವಾಳ, ಮಲ್ಪೆ, ಮೂಲ್ಕಿ, ಕಾರ್ಕಳ, ವಿಟ್ಲ, ಕಾಪು, ಮಣಿಪಾಲ, ಬಂಟ್ವಾಳ ನಗರ, ಮಂಗಳೂರು ಗ್ರಾಮಾಂತರ ಮೊದಲಾದ ಕಡೆ ಈತನ ವಿರುದ್ಧ ವಿವಿಧ ಪ್ರಕರಣಗಳಿವೆ.


ಉತ್ತರ ಉಪವಿಭಾಗದ ಸಹಾಯಕ ಆಯುಕ್ತ ಮನೋಜ್ ಕುಮಾರ್ ಅವರ ನಿರ್ದೇಶನದಂತೆ ಸುರತ್ಕಲ್ ಪೊಲೀಸು ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಪೊಲೀಸು ಉಪನಿರೀಕ್ಷಕ ಮಲ್ಲಿಕಾರ್ಜುನ್ ಸಿಬ್ಬಂದಿ ಅಜಿತ್ ಮ್ಯಾಥ್, ಮಣಿಕಂಠ, ಕಾರ್ತಿಕ್ ಅವರ ತಂಡ ಆರೋಪಿಯನ್ನು ಬಂಧಿಸಿ, ಮಂಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯದ ಆದೇಶದಂತೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net