

ಹರಪನಹಳ್ಳಿ: ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಸಿ.ಸಿ. ರಸ್ತೆ, ಚರಂಡಿ ನಿರ್ಮಾಣ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಕರುಣಾಕರರೆಡ್ಡಿ ಮಂಗಳವಾರ ಚಾಲನೆ ನೀಡಿದರು.
ವಾರ್ಡ್‌ಗಳ ಸಮಗ್ರ ಅಭಿವೃದ್ಧಿಗೆ 3.25 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ. ಸ್ಲಂ ಬೋರ್ಡ್‌ನಿಂದ ಪಟ್ಟಣದಲ್ಲಿ 1150 ಮನೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಈಗಾಗಲೇ 250 ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಕರುಣಾಕರ ರೆಡ್ಡಿ ಹೇಳಿದರು.
ಮನೆಗಳ ನಿರ್ಮಾಣ ಪೂರ್ವ ಒಬ್ಬ ಫಲಾನುಭವಿ 1 ಲಕ್ಷ ರೂ. ಪಾವತಿಸಬೇಕಾಗಿತ್ತು. ಆದರೆ, ಈ ಬಗ್ಗೆ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ, ಕೇವಲ 25 ಲಕ್ಷ ರೂ. ಪಾವತಿಸುವಂತೆ ಮಾಡಲಾಗಿದೆ. ಕೆರೆಗಳಿಗೆ ನದಿ ನೀರು ತುಂಬಿಸುವ ಯೋಜನೆ ಉದ್ಘಾಟನೆಗೆ ಸಿದ್ಧವಾಗಿದ್ದು, ಇದೇ ತಿಂಗಳಲ್ಲಿ ದಿನಾಂಕ ನಿಗದಿ ಮಾಡಿ ಲೋಕರ್ಪಣೆಗೊಳಿಸಲಾಗುವುದು ಎಂದು ತಿಳಿಸಿದರು.
ಪುರಸಭೆ ಅಧ್ಯಕ್ಷ ಎಚ್.ಎಂ.ಅಶೋಕ, ಸದಸ್ಯರಾದ ಕಿರಣ್ ಶ್ಯಾನಬೋಗ್, ಜಾವಿದ್, ಭರತೇಶ್ ಜೋಗಿನ್, ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ, ಸಿದ್ಧೇಶ್ವರ ಸ್ವಾಮಿ, ಮನೋಜ ತಳವಾರ, ಶಿವಾನಂದ, ಎಂ.ಮಲ್ಲೇಶ್, ಬಾಗಳಿ ಕೊಟ್ರೇಶಪ್ಪ, ಮಹೇಶ ಪೂಜಾರ ಇದ್ದರು.