ವಾರ್ಡ್​ವಾರು ಕಾಮಗಾರಿಗಳ ಪ್ರಗತಿ ಪರಿಶೀಲನೆ

New Tenginakayi Meeting New
Published on

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಶಾಸಕ ಮಹೇಶ ಟೆಂಗಿನಕಾಯಿ ಅವರು ಮಹಾನಗರ ಪಾಲಿಕೆ, ಎಲ್ ಆಂಡ್ ಟಿ, ಕಂದಾಯ, ಅರಣ್ಯ ಇಲಾಖೆ, ಕೆಐಡಿಬಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ಇಲ್ಲಿನ ಜೆ.ಸಿ. ನಗರದ ತಮ್ಮ ಕಚೇರಿಯಲ್ಲಿ ಸೋಮವಾರ ನಡೆಸಿದರು.

ಸೆಂಟ್ರಲ್ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಟುತ್ತ ಸಾಗುತ್ತಿರುವ ಕಾರಣ ಶಾಸಕ ಟೆಂಗಿನಕಾಯಿ ಅವರು, ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ವಾರ್ಡ್​ವಾರು ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲಿಸಿದರು. ಮಳೆಗಾಲ ಆರಂಭಗೊಳ್ಳುವುದರೊಳಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.

ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net