ವಾರ್ಡನ್ ನಿರ್ಲಕ್ಷದಿಂದ ಹಾಸ್ಟೆಲ್‌ನಲ್ಲಿ ಸಮಸ್ಯೆ

7mnv05
Published on

ಮಾನ್ವಿ: ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ವಾರ್ಡನ್ ಮತ್ತು ಅಧಿಕಾರಿಗಳ ನಿರ್ಲಕ್ಷೃದಿಂದ ಸಮಸ್ಯೆಗಳು ಆಗುತ್ತಿವೆ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ಊಟದ ನಂತರ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಪಟ್ಟಣದ ತಾಯಿ-ಮಕ್ಕಳ ಆಸ್ಪತ್ರೆಗೆ ದಾಖಲಾಗಿರುವ ರಾಜಲಬಂಡಾ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ ಭಾನುವಾರ ಮಾತನಾಡಿದರು. ನೀರಿನ ಟ್ಯಾಂಕ್ ಅನ್ನು ಬ್ಲೀಚಿಂಗ್ ಪೌಡರ್‌ನಿಂದ ತೊಳೆದ ಮೇಲೆ ಟ್ಯಾಂಕ್ ಸ್ವಚ್ಛವಾಗಿರುವುದನ್ನು ಪರಿಶೀಲಿಸದೆ ನೀರು ತುಂಬಿಸಲಾಗಿದೆ. ಬಳಿಕ ಅದೇ ನೀರನ್ನು ಅಡುಗೆಗೆ ಬಳಕೆ ಮಾಡಿರುವುದರಿಂದ 27 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net