ವಾರ್ಡ್‌ಗಳಿಗೆ ಶುದ್ಧ ಕುಡಿವ ನೀರು ಪೂರೈಸಿ; ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯ

120220 Lingasuguru Karave Appeal for Pure Water
Published on

ಲಿಂಗಸುಗೂರು: ಸ್ಥಳೀಯ ಪುರಸಭೆಯ ಎಲ್ಲ ವಾರ್ಡ್‌ಗಳಿಗೆ ಶುದ್ಧ ಹಾಗೂ ಸಮರ್ಪಕ ಕುಡಿವ ನೀರು ಪೂರೈಕೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಎಸಿ ಡಾ.ದಿಲೀಷ್ ಶಶಿಗೆ ಬುಧವಾರ ಮನವಿ ಸಲ್ಲಿಸಿದರು.

ಪುರಸಭೆ ವ್ಯಾಪ್ತಿಯ ಲಿಂಗಸುಗೂರು, ಕರಡಕಲ್, ಹುಲಿಗುಡ್ಡ, ಕಸಬಾಲಿಂಗಸುಗೂರಿಗೆ ನಾಲ್ಕಾರು ತಿಂಗಳಿಂದ ಎರಡು ಮೂರು ದಿನಕ್ಕೊಮ್ಮೆ ಅದೂ ಕಲುಷಿತ ನೀರು ಪೂರೈಕೆ ಮಾಡಲಾಗುತ್ತಿದೆ. ಜನರಲ್ಲಿ ಆರೋಗ್ಯದ ಸಮಸ್ಯೆ ಉಂಟಾಗುತ್ತಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಪರದಾಡುವುದಕ್ಕೂ ಮುನ್ನ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕಿದೆ ಎಂದು ಒತ್ತಾಯಿಸಿದರು.

ಕರವೇ ತಾಲೂಕು ಅಧ್ಯಕ್ಷ ಜಿಲಾನಿಪಾಷಾ, ಶಿವರಾಜ ನಾಯಕ, ಅಜೀಜ್ ಪಾಷಾ, ರವಿಕುಮಾರ ಬರಗುಡಿ, ಹನುಮಂತ ನಾಯಕ, ಚಂದ್ರು ನಾಯಕ, ಜಮೀನ್ ಖಾನ್, ಅಲ್ಲಾವುದ್ದಿನ್, ಸಲ್ಮಾನ್‌ಖಾನ್, ಇರ್ಫಾನ್ ಚೌಧರಿ, ಮಹ್ಮದ್ ಆರೀಫ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net