ಶಾಸಕ ಹ್ಯಾರಿಸ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

web 1
Published on

ಭದ್ರಾವತಿ: ವರನಟ ಡಾ. ರಾಜ್​ಕುಮಾರ್ ಪುತ್ಥಳಿ ಕುರಿತು ಅವಹೇಳನ ಮಾಡಿರುವ ಕಾಂಗ್ರೆಸ್ ಶಾಸಕ ಹ್ಯಾರಿಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಜನಸೈನ್ಯ ಸಂಘಟನೆ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಮಂಜುನಾಥ್ ಮಾತನಾಡಿ, ಕಾಂಗ್ರೆಸ್ ಶಾಸಕ ಹ್ಯಾರಿಸ್ ಹಾಗೂ ಅವರ ಪುತ್ರ ಮಹಮ್ಮದ್ ಹ್ಯಾರಿಸ್ ನಲಪಾಡ್ ಇಬ್ಬರು ಸಹ ಪದೇಪದೆ ಕನ್ನಡಿಗರ ಸ್ವಾಭಿಮಾನ ಕೆಣಕುವ ಜತೆಗೆ ನಾಡು-ನುಡಿಗೆ ಅವಮಾನ ಮಾಡುತ್ತಿದ್ದಾರೆ. ತಕ್ಷಣ ಅವರನ್ನು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಪಕ್ಷದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇದಕ್ಕೂ ಮೊದಲು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಹ್ಯಾರಿಸ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಜಿಲ್ಲಾ ಗೌರವಾಧ್ಯಕ್ಷ ಅನಿಲ್(ಬಾಬು), ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್, ಗ್ರಾಮಾಂತರ ಅಧ್ಯಕ್ಷ ಪ್ರದೀಪ್, ತಾಲೂಕು ಅಧ್ಯಕ್ಷ ರಾಜು, ಪರಮೇಶ್, ಸಂತೋಷ್​ಕುಮಾರ್, ದೀಕ್ಷಿತ್, ಚೇತನ್, ಶಿವು, ಸುನೀಲ್, ಜಗ್ಗ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net