ತ್ಯಾಜ್ಯಕ್ಕೆ ಬೆಂಕಿ,40 ಲಕ್ಷ ರೂ. ಮೌಲ್ಯದ ಯಂತ್ರೋಪಕರಣ ಭಸ್ಮ

Published on

ಮೈಸೂರು: ತ್ಯಾಜ್ಯ ವಸ್ತು ಸಂಸ್ಕರಣಾ ಘಟಕಕ್ಕೆ ಬೆಂಕಿ ಬಿದ್ದು 50 ಟನ್ ತ್ಯಾಜ್ಯ ಬೆಂಕಿಗಾಹುತಿ ಅಗಿರುವುದಲ್ಲದೇ ಸುಮಾರು 40 ಲಕ್ಷ ರೂ. ಮೌಲ್ಯದ ಯಂತ್ರೋಪಕರಣ ಸುಟ್ಟು ಹೋಗಿವೆ.

ನಗರದ ಹಳೆ ಕೆಸರೆಯಲ್ಲಿನ ಶೂನ್ಯ ತ್ಯಾಜ್ಯ ವಸ್ತು ಸಂಸ್ಕರಣಾ ಘಟಕದಲ್ಲಿ ಸೋಮವಾರ ಮುಂಜಾನೆ 5 ಗಂಟೆಯಲ್ಲಿ ಸಂಸ್ಕರಣಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಎಲ್ಲೆಡೆ ವ್ಯಾಪಿಸಿದೆ. ಈ ಕುರಿತು ಸ್ಥಳೀಯರು ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸತತ ಮೂರು ಗಂಟೆ ಕಾರ್ಯಾಚರಣೆ ನಡೆಸುವ ಮೂಲಕ ಬೆಂಕಿಯನ್ನು ನಿಯಂತ್ರಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು. ಈ ವೇಳೆಗಾಗಲೇ ಬೆಂಕಿ ಅನಾಹುತರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿತ್ತು. ಆದರೆ ಬೆಂಕಿ ಹೇಗೆ ಕಾಣಿಸಿಕೊಂಡಿತು ಎನ್ನುವ ಮಾಹಿತಿ ಲಭ್ಯವಾಗಿಲ್ಲ.

ತ್ಯಾಜ್ಯದೊಂದಿಗೆ ಅಪಾರ ಪ್ರಮಾಣದ ಪ್ಲಾಸ್ಟಿಕ್ ಬೆಂಕಿಗಾಹುತಿಯಾದ ಕಾರಣ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿತ್ತು. ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯಗಳ ಸುಟ್ಟ ದುರ್ವಾಸನೆಯೂ ತುಂಬಿ ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು .

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net