ಅ.೧೫ ರಂದು ತ್ಯಾಜ್ಯ ವಿಲೇವಾರಿ ಅಭಿಯಾನ

logo
Published on

ಮಡಿಕೇರಿ: ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್‌ನಿಂದ ಹಲವಾರು ಸಂಘಸಂಸ್ಥೆಗಳ ಸಹಯೋಗದಲ್ಲಿ ಅ.೧೫ ರಂದು ಬುಧವಾರ ಕೊಡಗು ಜಿಲ್ಲೆಯಾದ್ಯಂತ ಬೃಹತ್ ರೀತಿಯಲ್ಲಿ ಸ್ವಚ್ಛ ಕೊಡಗು-ತ್ಯಾಜ್ಯ ವಿಲೇವಾರಿ ಅಭಿಯಾನ ಆಯೋಜಿಸಲಾಗಿದೆ ಎಂದು ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ.೧೫ ರಂದು ಬುಧವಾರ ಬೆಳಗ್ಗೆ ೮ ಗಂಟೆಯಿಂದ ಕೊಡಗಿನಾದ್ಯಂತ ರಸ್ತೆ ಬದಿಗಳಲ್ಲಿನ ಕಸ, ತ್ಯಾಜ್ಯಗಳನ್ನು ವಿಲೇವಾರಿ ಮಾಡುವ ಮೂಲಕ ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ಹೊಣೆಯರಿತ ಪ್ರವಾಸೋದ್ಯಮಕ್ಕೆ ಪೂರಕವಾಗಿ ಸ್ಪಂದಿಸಲಿದೆ. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಕೊಡಗು ಹೋಂಸ್ಟೇ ಅಸೋಸಿಯೇಷನ್, ಕೊಡಗು ಚೇಂಬರ್ ಆಫ್ ಕಾಮರ್ಸ್, ಕೊಡಗು ಟ್ರಾವಲ್ ಅಸೋಸಿಯೇಷನ್, ರೋಟರಿ, ಲಯನ್ಸ್, ರೆಡ್‌ಕ್ರಾಸ್, ಗ್ರೀನ್ ಸಿಟಿ ಫೋರಂ, ಖಾಸಗಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಹಲವಾರು ಸಂಘಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲೆಯ ಹಲವಾರು ಸಂಸ್ಥೆಗಳು ಈ ಸ್ವಚ್ಚತಾ ಅಭಿಯಾನಕ್ಕೆ ಕೈಜೋಡಿಸಿವೆ ಎಂದು ತಿಳಿಸಿದ್ದಾರೆ.

ಕೊಡಗಿನಾದ್ಯಂತ ಮುಖ್ಯ ರಸ್ತೆಗಳ ಇಕ್ಕೆಲಗಳೂ ಸೇರಿದಂತೆ ಇತರ ರಸ್ತೆಗಳ ಬದಿಗಳಲ್ಲಿರುವ ತ್ಯಾಜ್ಯಗಳನ್ನು ಆ ವ್ಯಾಪ್ತಿಯಲ್ಲಿರುವ ರೆಸಾರ್ಟ್, ಹೋಟೇಲ್, ರೆಸ್ಟೋರೆಂಟ್, ವರ್ತಕರು, ಸಂಘ ಸಂಸ್ಥೆಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳ ಸಹಕಾರದಲ್ಲಿ ವಿಲೇವಾರಿ ಮಾಡಿ ಸ್ವಚ್ಚತೆಯ ಸಂದೇಶವನ್ನು ಸಾರಲಾಗುತ್ತದೆ. ಇದೇ ಮೊದಲ ಬಾರಿಗೆ ಕೊಡಗಿನಲ್ಲಿ ಇಂಥಹ ಬೃಹತ್ ರೀತಿಯ ಸ್ವಚ್ಛತಾ ಅಭಿಯಾನ ಏಕದಿನ, ಏಕಕಾಲದಲ್ಲಿ ಆಯೋಜಿಸಲ್ಪಟ್ಟಿದೆ ಎಂದು ದಿನೇಶ್ ತಿಳಿಸಿದರು.

ಕೊಡಗನ್ನು ಸ್ವಚ್ಛತೆಯೊಂದಿಗೆ ಸುಂದರವಾಗಿವಲ್ಲಿ ಪ್ರತೀರ್ಯೋರ ಪಾಲು ಮಹತ್ವದ್ದಾಗಿದೆ. ಹೀಗಾಗಿ ಕೊಡಗಿನ ಪ್ರತೀಯರ್ವರೂ ಕೊಡಗಿನ ಸ್ವಚ್ಛತೆಯ ಮೇಲಿನ ಕಾಳಜಿಯಿಂದ ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net