ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಬಿಡುಗಡೆ

07GDG05A
Published on

ಗದಗ: ಜಿಲ್ಲೆಯ ನರಗುಂದ ಹಾಗೂ ರೋಣ ತಾಲೂಕಿನ ಗ್ರಾಮಗಳ ಜನ ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಮಲಪ್ರಭಾ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆಗೆ 750 ಕ್ಯೂಸೆಕ್ಸ್ ನೀರನ್ನು ಸೆ.22 ರ ಬೆಳಿಗ್ಗೆ 8 ಗಂಟೆಯಿಂದ 15 ದಿನಗಳವರೆಗೆ  ನವಿಲುತೀರ್ಥ  ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆ ಮೂಲಕ ನೀರನ್ನು ಹರಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ. ನವಿಲು ತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆಗೆ ಬಿಡಲಾದ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಹರಿಬಿಡಲಾದ ನೀರನ್ನು ಬೇರಾವುದೇ ಉದ್ದೇಶಕ್ಕೆ ಬಳಸಿಕೊಳ್ಳದಂತೆ ನಿಗಾ ವಹಿಸುವುದರ ಜೊತೆಗೆ ಮಲಪ್ರಭಾ ಬಲದಂಡೆ ಕಾಲುವೆಯ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದನ್ನು ದನಕರುಗಳನ್ನು ನದಿ/ ಕಾಲುವೆಗೆ ಇಳಿಸುವುದಾಗಲೀ, ಎಚ್ಚರಿಕೆ ನೀಡುವುದರೊಂದಿಗೆ ಈ ಅವಧಿಯಲ್ಲಿ ರೈತ ಬಾಂಧವರು ನದಿ ದಂಡೆ ಕಾಲುವೆಗೆ ಅಳವಡಿಸಿರುವ ಪಂಪಸೆಟ್‍ಗಳಿಂದ ನೀರೆತ್ತುವುದನ್ನು ಸಹ ನಿಷೇಧಿಸಿದೆ ಹಾಗೂ ಕೆಳಕಂಡ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದ್ದಾರೆ.

ನವಿಲು ತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆಗೆ ಹರಿಬಿಡಲಾದ ನೀರನ್ನು ಯಾವುದೇ ಕಾರಣಕ್ಕೂ ಕೃಷಿಗೆ ಬಳಸತಕ್ಕದ್ದಲ್ಲ.  ಕೆವಲ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ಉಪಯೋಗಿಸತಕ್ಕದ್ದು.  ಹರಿಬಿಡಲಾದ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆ ಮಾಡುವ ಕುರಿತಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ರಚನೆ ಮಾಡಿ ಅದರ ಸದುಪಯೋಗ ಕುರಿತು ಸೂಕ್ತ ನಿಗಾವಹಿಸುವುದು . ಅಲ್ಲದೆ ದೈನಂದಿನ ವರದಿ ಸಲ್ಲಿಸುವುದು, ನೀರಿನ ಸದ್ಬಳಕೆ ಕುರಿತುಸಾಕ್ಷಚಿತ್ರ ಪಡೆದು ಸಲ್ಲಿಸುವುದು. ನವಿಲುತೀರ್ಥ ಜಲಾಶಯದಿಂದ ಕಾಲುವೆಗಳಿಗೆ ಬಿಡುಗಡೆಗೊಳಿಸಲಾಗಿರುವ ನೀರು ಉದ್ದೇಶಿತ ಸ್ಥಳವನ್ನು ತಲುಪುವಂತೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು,ನೀರಾವರಿ ಇಲಾಖಾ ಅಧಿಕಾರಿಗಳು ನೋಡಿಕೊಳ್ಳತಕ್ಕದ್ದು. ಪ್ರಸ್ತಾಪಿತ ಸ್ಥಳದಲ್ಲಿ ನೀರು ಭರ್ತಿಯಾದಲ್ಲಿ  ಅಥವಾ ನೀರು ಸಾಕೆನಿಸಿದಲ್ಲಿ ಕೂಡಲೇ  ನೀರಿನ ಹರಿವನ್ನು  ಸ್ಥಗಿತಗೊಳಿಸಲು ಕ್ರಮ ಜರುಗಿಸಬೇಕು ಎಂದು  ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದ್ದಾರೆ.    

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net