

ಸುಂಟಿಕೊಪ್ಪ: ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಗುಡುಗು ಸಿಡಿಲು ಸಹಿತ ಮಳೆಗೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು.
ಚರಂಡಿ ಹಾಗೂ ರಸ್ತೆ ಮೇಲೆ ಹರಿಯುವ ಕೊಳಚೆ ನೀರು ನುಗ್ಗಿದ್ದರಿಂದ ಇಲ್ಲಿನ ಜನರು ಪರದಾಡುವಂತಾಯಿತು. 10ರಿಂದ 12 ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದೆ.
ಕಷ್ಟದಿಂದ ಕೂಲಿ ಹಣದಿಂದ ಮನೆ ನಿರ್ಮಿಸಿಕೊಂಡಿದ್ದು, ಮಳೆಯ ಪ್ರಮಾಣ ಹೆಚ್ಚಾದಾಗಲೆಲ್ಲ ಸಮಸ್ಯೆ ಕಾಡುತ್ತದೆ. ಸಂಬಂಧ ಪಟ್ಟವರು ಶಾಶ್ವತ ಪರಿಹಾರ ಒದಗಿಸಿಕೊಡಲು ಕ್ರಮ ವಹಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧಕ್ಷ ಪಿ.ಆರ್.ಸುನಿಲ್‌ಕುಮಾರ್ ಹಾಗೂ ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯ ಪಿ.ಎಫ್.ಸಬಾಸ್ಟೀನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.