

ಕೆ.ಆರ್.ಸಾಗರ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಮುಂಗಾರು ಬೆಳೆಗಳಿಗೆ ಕೃಷ್ಣರಾಜಸಾಗರ ಅಣೆಕಟ್ಟೆಯಿಂದ ನೀರು ಬಿಡಗಡೆ ಮಾಡಲು ತೀರ್ಮಾನಿಸಲಾಯಿತು. ನೀರನ್ನು ಕಟ್ಟು ಪದ್ಧತಿಯಂತೆ 18 ನೀರು ಬಿಡುಗಡೆ ಮಾಡುವುದು 12 ದಿನ ನಿಲುಗಡೆ ಮಾಡುವುದಾಗಿ ಅಧಿಕಾರಿಗಳು ತಿಳಿಸಿದರು.
ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮುಂಗಾರಿನಲ್ಲಿ ಉತ್ತಮ ಮಳೆಯಗುತ್ತಿದ್ದು, ಕಾವೇರಿ ನದಿ ವ್ಯಾಪ್ತಿಯಲಿನ ಕೆರೆ-ಕಟ್ಟೆಗಳನ್ನು ತುಂಬಿಸಲು ಮೊದಲ ಆದ್ಯತೆ ನೀಡಿ, ಇದರಿಂದ ಮುಂದಿನ ದಿನಗಳಲ್ಲಿ ರೈತರಿಗೆ ಉಪಯುಕ್ತವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಸೋಮವಾರ ಕೆ.ಆರ್.ಸಾಗರದ ಬೃಂದಾವನದ ಕಾವೇರಿ ಸಭಾಂಗಣದಲ್ಲಿ ನಡೆದ ಕೃಷ್ಣರಾಜಸಗರ ಜಲಾಶಯ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಮಾತನಾಡಿದರು. ಈಗ ಉತ್ತಮ ಸಮಯವಾಗಿದ್ದು ಕಾವೇರಿ ಜಲಾನಯನ ವ್ಯಾಪ್ತಿಯ ಜಿಲ್ಲೆಗಳಲ್ಲಿ ಇರುವ ಕೊನೆ ಭಾಗದಲ್ಲಿರುವ ಕರೆಗಳಿಗೆ ನೀರು ತುಂಬುವಂದಿ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಹೇಳಿದರು.
ಕೃಷ್ಣರಾಜ ಸಾಗರ ಅಣೆಕಟ್ಟೆ ಭರ್ತಿಯಾಗಿದ್ದು, ರೈತರು, ಜನಪ್ರತಿನಿಧಿಗಳು ಹಾಗೂ ಸಂಘಟನೆಗಳು ಕೃಷಿ ಪದ್ಧತಿಗೆ ನೀರು ಸಿಗುತ್ತಿಲ್ಲ ಎಂಬ ದೂರು ಭಾರದಂತೆ ನೋಡಿಕೊಂಡು ಎಚ್ಚರಿಕೆಯಿಂದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು, ಕೆರೆಗಳಿಂದ ಹೂಳು ತೆಗೆಯುವ ಕೆಲಸ ಮತ್ತು ಕೆರೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಅನುದಾನದ ಕೊರತೆ ಇಲ್ಲ. ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಅನುದಾನ ಪಡೆದು ಕೆರೆಗಳ ನಿರ್ವಹಣೆ ಕಾಮಗಾರಿಗಳನ್ನು ನಡೆಸಲು ಸೂಚಿಸಿದರು.
ರೈತರ ಪರವಾಗಿ ಸದಾ ನಮ್ಮ ಸರ್ಕಾರ ಕಾರ್ಯ ರ್ನಿಹಿಸುತ್ತ್ತದೆ. ಮುಂಗಾರು ಬೆಳಗೆ ಗುಣಮಟ್ಟದ ಬಿತ್ತನೆ ಬೀಜ, ಗೊಬ್ಬರ ಒದಗಿಸುವಂತೆ ಕೃಷಿ ಇಲಾಖೆಗೆ ಸೂಚನೆ ನೀಡಲಾಗಿದೆ, ಕೃಷಿ ಚಟುವಟಿಕೆಗಳು ಚುರುಕಾಗಿದ್ದು, ರೈತರಿಗೆ ಬೇಕಾಗಿರುವ ಮಾಹಿತಿ ಒದಗಿಸಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶ್ರೀರಂಗಪಟ್ಟಣ ವಿಧಾನ ಸಭಾ ಕ್ಷೇತ್ರದ ಶಾಸಕ ರಮೇಶಬಾಬು ಬಂಡಿಸಿದ್ದೇಗೌಡ ಮಾತನಾಡಿ, ಸದ್ಯದ ಪರಿಸ್ಥಿತಿಯಲ್ಲಿ ಕೃಷಿಗೆ ಯಾವುದೇ ತೊಂದರೆ ಇಲ್ಲ. ಬೇಸಿಗೆ ಬೆಳೆಗೆ ಬೇಕಾಗಿರುವ ನೀರಿನ ಬಗ್ಗೆ ಯೋಜನೆ ರೂಪಿಸಬೇಕಾಗಿದೆ ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ, ಕೆ.ಆರ್.ಸಾಗರ ಅಣೆಕಟ್ಟೆ ವ್ಯಾಪ್ತಿಯಲ್ಲಿ ಕಳೆದ 10 ವರ್ಷಗಳಲ್ಲಿ ಬಿತ್ತನೆ ಪ್ರಮಾಣ ಮತ್ತು ನೀರು ಹರಿಸಿರುವ ವಿವರಗಳನ್ನು ಸಭೆಗೆ ವಿವರಿಸಿದರು.
ಸಭೆಯಲ್ಲಿ ಮಂಡ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಮದ್ದೂರು ಕ್ಷೇತದ ಶಾಸಕ ಕದಲೂರು ಉದಯ್, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ಕಾಡಾ ಅಧ್ಯಕ್ಷ ಮರಿಸ್ವಾಮಿ, ಜಿ.ಪಂ ಸಿಇಒ ಕೆ.ಆರ್.ನಂದಿನಿ, ಮಂಡ್ಯ ಜಿಲ್ಲಾ ಎಸ್.ಪಿ.ಮಲ್ಲಿಕಾರ್ಜುನ ಬಾಲದಂಡಿ, ಕಾವೇರಿ ನೀರಾವರಿ ನಿಗಮದ ಪ್ರಭಾರ ಮುಖ್ಯ ಇಂಜಿನಿಯರ್ ರಘುರಾಮ್, ವರುಣಾ ವಿಭಾಗದ ಅಧಿಕ್ಷ ಇಂಜಿನಿಯರ್ ಮಹೇಶ್, ಕಾವೇರಿ ನೀರಾವರಿ ನಿಗಮದ ಇಇ ಜಯಂತ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ಶ್ರೀರಂಗಪಟ್ಟಣ ತಹಸೀಲ್ದಾರ್ ಚೇತನಾ ಯಾದವ್, ನೀರಾವರಿ ಸಲಹಾ ಸಮಿತಿ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.