ಒತ್ತಡಕ್ಕೆ ಮಣಿದು ಕೈಗಾರಿಕೆಗೆ ನೀರು

IMG20250602211003.jpg
Published on

ಬೆಳಗಾವಿ: ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕೆ ಪ್ರದೇಶಕ್ಕೆ ನೀರು ಸರಬರಾಜು ಮಾಡುವ ಕಾಮಗಾರಿಗೆ ಕೂಡಲೇ ತಡೆ ನೀಡುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ) ಬಣದ ಕಾರ್ಯಕರ್ತರು ಸೋಮವಾರ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ನಮ್ಮ ಜಿಲ್ಲೆಗೆ ಬೇಸಿಗೆ ಸಮಯದಲ್ಲಿ ನದಿಗಳು ಭತ್ತಿ, ಜನ ಜಾನುವಾರಗಳಿಗೆ ನೀರಿನ ಕೊರತೆ ಉಂಟಾಗುತ್ತಿದೆ. ಹಿಡಕಲ್ಲ ಜಲಾಶಯದ ನೀರು ನಮ್ಮ ಜಿಲ್ಲೆಯ ಜನರಿಗೆ ಅನುಕೂಲವಾಗಬೇಕು. ಯಾರದ್ದೋ ಒತ್ತಡಕ್ಕೆ ಮಣಿದು ಧಾರವಾಡ ಕೈಗಾರಿಕೆ ಪ್ರದೇಶಕ್ಕೆ ನೀರು ಸರಬರಾಜು ಯೋಜನೆಗೆ ಅನುಮತಿ ನೀಡಿದ್ದು ಖಂಡನೀಯ. ಕೂಡಲೇ ರಾಜ್ಯ ಸರ್ಕಾರ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.

ವಾಜೀದ್ ಹಿರೇಕುಡಿ, ಯುನೀಸ್ ಹಿರೇಕುಡಿ, ಅರವಿಂದ ನೇರಳೆ, ಅಣ್ಣಾಸಾಹೇಬ ತೆಲಸಂಗ, ಜಗದೀಶ ಬಾಮನೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net