ಜಿಲ್ಲೆಯಲ್ಲಿ ಮಳೆ, ನದಿಗಳ ಅಬ್ಬರ; 27 ಸೇತುವೆಗಳು ಮುಳಗಡೆ

IMG-20230724-WA0012.jpg
Published on

ಬೆಳಗಾವಿ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಾಗೂ ನೆರೆಯ ಮಹಾರಾಷ್ಟ್ರದ ಘಟ್ಟಪ್ರದೇಶಗಳಲ್ಲಿ ಮಳೆ ಮುಂದುವರಿದಿದೆ.
  ಜಿಲ್ಲೆಯ ನದಿಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಮೂಡಲಗಿ, ಗೋಕಾಕ,ಖಾನಾಪುರ, ಹುಲ್ಕೇರಿ,ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ 27ಸೇತುವೆ ಜಲಾವೃತಗೊಂಡಿವೆ. ಕೆಲವು ಕಡೆ ಸಂಚಾರ ಸ್ಥಗಿತಗೊಂಡಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ.
ಘಡಪ್ರಭಾ, ಕೃಷ್ಣಾ ಮತ್ತು ಅದರ ಉಪನದಿಗಳಾದ ವೇದಗಂಗಾ, ದೂಧಗಂಗಾ ನದಿಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net