ಢವಳೇಶ್ವರ ಸೇತುವೆ ಮೇಲೆ ನೀರು

Water on Dhavleshwar Bridge
ಮಹಾಲಿಂಗಪುರ ಸಮೀಪದ ಢವಳೇಶ್ವರ ಗ್ರಾಮದ ಬಳಿ ಅಪಾಯಮಟ್ಟದಲ್ಲಿ ಹರಿಯುತ್ತಿರುವ ನೀರು.
Published on

ಮಹಾಲಿಂಗಪುರ: ಸಮೀಪದ ಢವಳೇಶ್ವರ ಗ್ರಾಮದ ಸೇತುವೆ ಮೇಲೆ ಅಪಾಯಮಟ್ಟದಲ್ಲಿ ನೀರು ಹರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ.

ಶುಕ್ರವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿದ್ದ ಜಿಎಲ್‌ಬಿಸಿ ಎಇಇ ವೆಂಕಟೇಶ ಬೆಳಗಲ್ ಅವರು ‘ವಿಜಯವಾಣಿ’ ಪ್ರತಿನಿಧಿಯೊಂದಿಗೆ ಮಾತನಾಡಿ, ಜನರ ಸುರಕ್ಷತೆ ದೃಷ್ಟಿಯಿಂದ ಸೇತುವೆ ಮೇಲೆ ಸಂಚರಿಸದಂತೆ ಬ್ಯಾರಿಕೇಡ್ ಹಾಕಲಾಗಿದೆ. ಮಹಾಲಿಂಗಪುರದಿಂದ ಮುಧೋಳ, ಉತ್ತೂರ, ಮಿರ್ಜಿ, ಮಲ್ಲಾಪುರ ಮಾರ್ಗವಾಗಿ ಸಂಚರಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಒಂದು ವೇಳೆ ಪ್ರವಾಹ ಮುಂದುವರಿದರೆ ಗ್ರಾಮಸ್ಥರನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಮುಧೋಳ ತಾಲೂಕು ವೈದ್ಯಾಧಿಕಾರಿ ಎಸ್.ಜಿ. ಮಲಘಾಣ ಮಾತನಾಡಿ, ಗ್ರಾಮಸ್ಥರು ನೀರನ್ನು ಕಾಯಿಸಿ ಆರಿಸಿ ಕುಡಿಯಬೇಕು. ಅಲ್ಲದೆ, ರೋಗರುಜಿನಗಳು ಹರಡದಂತೆ ಆರೋಗ್ಯ ಇಲಾಖೆಯಿಂದ ನಿರಂತರ ನಿಗಾ ವಹಿಸಲಾಗಿದ್ದು, ಅಗತ್ಯವಿದ್ದರೆ ಔಷಧ ವಿತರಿಸಲಾಗುವುದು ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆ ಎಇ ಸರದಾರಅಲಿ ಮುಜಾವರ, ಢವಳೇಶ್ವರ ಪಿಡಿಒ ಸಿದ್ರಾಮೇಶ ಕುಂದರಗಿಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net