

ಹುಬ್ಬಳ್ಳಿ: ತಾಲೂಕಿನ ನೂಲ್ವಿ ಗ್ರಾಮದ ಜಗದ್ಗುರು ರೇಣುಕಾಚಾರ್ಯ ಸಂಯುಕ್ತ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ರೋಟರಿ ಕ್ಲಬ್ ಹುಬ್ಬಳ್ಳಿ ಪೂರ್ವ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ಗ್ರೂಪ್ ಎಜುಕೇಶನ್ ಟ್ರಸ್ಟ್ ಸಹಯೋಗದೊಂದಿಗೆ ಶುದ್ಧ ನೀರಿನ ಘಟಕ ಸ್ಥಾಪನೆ ಮಾಡಲಾಗಿದೆ.
ಶಿಕ್ಷಣ ಸಂಸ್ಥೆ ಅಧ್ಯಕ್ಷ, ಮಾಜಿ ಸಚಿವ ಪಿ.ಸಿ. ಸಿದ್ದನಗೌಡರ, ರೋಟರಿ ಕ್ಲಬ್ 3170 ಜಿಲ್ಲಾ ಗವರ್ನರ್ ನಾಸಿರ್ ಬೋರಸದವಾಲಾ ಅವರು ನೀರಿನ ಘಟಕ ಉದ್ಘಾಟಿಸಿದರು. ಈ ಘಟಕದಿಂದ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಲಭ್ಯವಾಗಲಿದೆ ಎಂದು ತಿಳಿಸಿದರು.
ರೋಟರಿ ಕ್ಲಬ್ ಅಧ್ಯಕ್ಷರಾದ ಪ್ರಭು ಲಿಗಾಡಿ, ಶಿವಲಿಂಗಪ್ಪಾ ಆವಟೆ, ಕಾರ್ಯದರ್ಶಿ ರಾಹುಲ್ ನಾಗಮುಳೆ, ಕಾಲೇಜನ ಪ್ರಾಂಶುಪಾಲ ಕಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಜಗನ್ನಾಥಗೌಡ ಸಿದ್ದನಗೌಡರ ಹಾಗೂ ರೋಟರಿ ಸದಸ್ಯರು ಹಾಗೂ ಎಸ್ ಜೆಆರ್ ಗ್ರೂಪ್ ಎಜುಕೇಶನ್ ಸೊಸೈಟಿ ಸದಸ್ಯರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.