ತೈಲೂರು ಗ್ರಾಮದಲ್ಲಿ ನೀರಿಗೆ ಹಾಹಾಕಾರ

15M.D.R.5
ಮದ್ದೂರು ತಾಲೂಕಿನ ತೈಲೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಟ್ರ್ಯಾಂಕರ್ ಮೂಲಕ ಗ್ರಾಮಸ್ಥರಿಗೆ ನೀಡು ಕೊಡುತ್ತಿರುವುದು.
Published on

ಮದ್ದೂರು: ತಾಲೂಕಿನ ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೈಲೂರು ಗ್ರಾಮದಲ್ಲಿ ನೀರಿಗೆ ಹಾಹಾಕಾರ ಉಂಟಾಗಿದ್ದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರಾದ ತೈಲೂರು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನಲ್ಲಿ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದ್ದರೂ ಯಾವುದೇ ಸಂಬಂಧವಿಲ್ಲ ಎಂದು ಅಧಿಕಾರಿಗಳು ಕೈ ಕಟ್ಟಿ ಕುಳಿತುರುವುದು ಸರಿಯಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾರ್ಚ್‌ನಿಂದಲೂ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ. ಇಷ್ಟಾದರೂ ಸ್ಥಳಿಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸದಸ್ಯರು ಈ ಬಗ್ಗೆ ಗಮನ ಹರಿಸಿಲ್ಲ. ಅಲ್ಲದೆ ಗ್ರಾಪಂ ವ್ಯಾಪ್ತಿಯಲ್ಲಿ ಹಲವಾರು ವಿದ್ಯುತ್ ಪರಿವರ್ತಕಗಳು ಕೆಟ್ಟಿದ್ದರೂ ಈವರೆಗೂ ಸೆಸ್ಕ್ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಇದರಿಂದ ಸಮಸ್ಯೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಗ್ರಾಪಂ ವತಿಯಿಂದ 5 ದಿನಕ್ಕೆ ಒಂದು ಬಾರಿ ಮಾತ್ರ ಪ್ರತಿ ಮನೆಗೆ 5 ಬಿಂದಿಗೆ ಮಾತ್ರ ನೀರು ಕೊಡುತ್ತಿದ್ದಾರೆ. ಅದು ಕೂಡ ಕುಡಿಯಲು ಯೋಗ್ಯವಾಗಿಲ್ಲ. ಈ ಸಂಬಂಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅಗತ್ಯ ಕ್ರಮ ಕೈಗೊಳ್ಳದಿದ್ದರೆ ಗ್ರಾಮಸ್ಥರ ಜತೆಗೂಡಿ ತಾಪಂ ಹಾಗೂ ಸೆಸ್ಕ್ ಕಚೆರಿಗೆ ಮುತ್ತಿಗೆ ಹಾಕಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net