ನೀರು ಪೂರೈಕೆಯಲ್ಲಿ ವ್ಯತ್ಯಯ

29 HANUR 6 rain
ಹನೂರು ಪಟ್ಟಣಕ್ಕೆ ನೀರು ಸರಬರಾಜಾಗುವ ಹರಳೆ ಜಾಲ್‌ವೆಲ್‌ನ ಪಂಪ್‌ಹೌಸ್‌ಗೆ ನೀರು ಆವರಿಸಿರುವುದು.
Published on

ಹನೂರು: ಪಟ್ಟಣಕ್ಕೆ ಕಾವೇರಿ ಕುಡಿಯುವ ನೀರು ಸರಬರಾಜಾಗುವ ಹರಳೆ ಗ್ರಾಮದಲ್ಲಿನ ಜಾಕ್‌ವೆಲ್ ಪಂಪ್‌ಹೌಸ್‌ಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿರುವುದರಿಂದ ಪಟ್ಟಣದಲ್ಲಿ ಒಂದು ವಾರ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಕೆಆರ್‌ಎಸ್‌ನಿಂದ ಕಾವೇರಿ ನದಿಗೆ ಹೆಚ್ಚಿನ ನೀರನ್ನು ಹರಿ ಬಿಟ್ಟಿರುವುದರಿಂದ ಹನೂರಿಗೆ ನೀರು ಸರಬರಾಜಾಗುವ ಕೊಳ್ಳೇಗಾಲ ತಾಲೂಕಿನ ಹರಳೆಯ ಜಾಕ್‌ವೆಲ್ ಪಂಪ್‌ಹೌಸ್‌ಗೆ ನೀರು ಆವರಿಸಿದ್ದು, ಮುಳುಗಡೆಯಾಗುವ ಸ್ಥಿತಿಯಲ್ಲಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಇದರಿಂದ ಒಂದು ವಾರ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಪಟ್ಟಣದ ಜನತೆ ಸಹಕರಿಸುವುದರ ಮೂಲಕ ಕೊಳವೆ ಬಾವಿ ನೀರನ್ನು ಬಳಕೆ ಮಾಡಿಕೊಳ್ಳುವಂತೆ ಹಾಗೂ ಸಂಗ್ರಹಿಸಿಕೊಳ್ಳುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಪಿ ಮಹೇಶ್‌ಕುಮಾರ್ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net