ಗಡಿ ಜಿಲ್ಲೆಗಳಿಗೂ ಸುಜಲ ಶ್ರಾವಂತಿ ವಿಸ್ತರಿಸಲಿ

web 2
Published on

ಕೇಂದ್ರ ಜಲಶಕ್ತಿ ಸಚಿವರಿಗೆ ಸಂಸದ ಡಾ.ಕೆ. ಸುಧಾಕರ್ ಮನವಿ

ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಪರಿಗಣಿಸುವಂತೆ ಕೋರಿಕೆ

ಚಿಕ್ಕಬಳ್ಳಾಪುರ: ಆಂಧ್ರಪ್ರದೇಶದ ಹಂಡ್ರಿ ನೀವಾ ಸುಜಲ ಶ್ರಾವಂತಿ ನೀರಾವರಿ ಯೋಜನೆಯನ್ನು ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾವಾಂತರ ಜಿಲ್ಲೆಗಳಿಗೆ ವಿಸ್ತರಿಸಲು ಸಂಸದ ಡಾ.ಕೆ.ಸುಧಾಕರ್ ಕೇಂದ್ರ ಸರ್ಕಾರಕ್ಕೆ ಮನವಿ ವಾಡಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರನ್ನು ಭೇಟಿ ವಾಡಿದ ಸಂಸದ ಡಾ.ಕೆ.ಸುಧಾಕರ್ ಈ ಸಂಬಂಧ ಮನವಿ ಸಲ್ಲಿಸಿದ್ದಾರೆ.

ಕೃಷ್ಣಾ ನದಿಯಿಂದ ಆಂಧ್ರಪ್ರದೇಶದ ಗಡಿ ಭಾಗಗಳಾದ ಅನಂತಪುರ, ಚಿತ್ತೂರು, ಕರ್ನೂಲ್, ಕಡಪಕ್ಕೆ ಹಂದ್ರಿನೀವಾ ಸುಜಲ ಶ್ರಾವಂತಿ ಯೋಜನೆ ಮೂಲಕ ನೀರು ಪೂರೈಸಲಾಗುತ್ತಿದೆ. ಇದೇ ಯೋಜನೆಯಡಿ ಕರ್ನಾಟಕದ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾವಾಂತರ ಜಿಲ್ಲೆಗಳನ್ನು ಪರಿಗಣಿಸಬೇಕು. ಕೃಷ್ಣಾ ನದಿಯಿಂದ ನಾರಾಯಣಪುರ ಜಲಾಶಯದ ಮೂಲಕ 10 ಟಿಎಂಸಿ ನೀರು ಪೂರೈಸಬಹುದು ಎಂದು ತಿಳಿಸಿದ್ದಾರೆ.

ಬೆಂಗಳೂರು ಗ್ರಾವಾಂತರ, ಚಿತ್ರದುರ್ಗ, ತುಮಕೂರು, ಕೋಲಾರ ಜಿಲ್ಲೆಗಳ ಜನರಿಗೆ ನದಿ ಮೂಲಗಳಿಲ್ಲ. ಇಲ್ಲಿನ ಜನರು ಸಂಪೂರ್ಣವಾಗಿ ಮಳೆಯನ್ನೇ ಆಶ್ರಯಿಸಿದ್ದಾರೆ. ಈ ಭಾಗಕ್ಕೆ ಎಚ್.ಎನ್.ವ್ಯಾಲಿ, ಕೆ.ಸಿ.ವ್ಯಾಲಿ ಮೂಲಕ ನೀರು ಪೂರೈಸುತ್ತಿದ್ದರೂ ಸಂಪೂರ್ಣವಾಗಿ ಶುದ್ಧೀಕರಣಗೊಂಡಿಲ್ಲ. ಇದರಿಂದಾಗಿ ಜನರಿಗೆ ಕ್ಯಾನ್ಸರ್‌ನಂತಹ ವಾರಕ ರೋಗಗಳು ಬರುತ್ತಿವೆ. ವಾಲಿನ್ಯ ನಿಯಂತ್ರಣ ಮಂಡಳಿ ಈ ನೀರನ್ನು ಪರೀಕ್ಷಿಸಿ ಗುಣಮಟ್ಟದ ಬಗ್ಗೆ ಖಾತರಿ ನೀಡಿಲ್ಲ. ಇದರಿಂದಾಗಿ ಜನರು ಅನಿವಾರ್ಯವಾಗಿ ಕೊಳವೆಬಾವಿ ನೀರನ್ನು ಅವಲಂಬಿಸಿದ್ದು, ಇದು ಇನ್ನಷ್ಟು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಏತ ನೀರಾವರಿ ಯೋಜನೆ ಆರ್ಥಿಕ ಸಮಸ್ಯೆಯಿಂದಾಗಿ ಕಾಮಗಾರಿ ಕುಂಟುತ್ತ ಸಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುವುದರೊಂದಿಗೆ ಜಲಜೀವನ್ ಮಿಷನ್ ಯೋಜನೆಯನ್ನು ಸೇರ್ಪಡೆಗೊಳಿಸಬಹದು ಎಂದು ಡಾ.ಎಂ.ಸಿ. ಸುಧಾಕರ್ ಕೋರಿದ್ದಾರೆ.

ಭದ್ರಾ ಮೇಲ್ದಂಡೆ ವಿಸ್ತರಿಸಿ

ಕೇಂದ್ರದ 2023ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ೋಷಿಸಿ 5,300 ಕೋಟಿ ರೂ. ಮೀಸಲಿಡಲಾಗಿತ್ತು. ಚಿಕ್ಕಮಗಳೂರು, ಚಿತ್ರದುರ್ಗ, ದಾವಣೆಗೆರೆ, ತುಮಕೂರು ಜಿಲ್ಲೆಗಳಿಗೆ ಸೀಮಿತಗೊಳಿಸಿದ್ದು, ಇದನ್ನು ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾವಾಂತರ, ಕೋಲಾರ ಜಿಲ್ಲೆಗಳಿಗೆ ವಿಸ್ತರಿಸಿದರೆ 1 ಕೋಟಿ ಜನರಿಗೆ ಶುದ್ಧ ಕುಡಿಯುವ ನೀರು ಸಿಗಲಿದೆ. ಜತೆಗೆ ಬತ್ತಿ ಹೋಗಿರುವ ಪಾಲಾರ್, ಪೆನ್ನಾರ್, ಚಿತ್ರಾವತಿ, ತಿಪ್ಪಗೊಂಡನಹಳ್ಳಿಗೆ ಮತ್ತೆ ಸಮದ್ಧವಾಗಿ ನೀರು ಸಿಗಲಿದೆ ಎಂದು ಸಂಸದರು ಮನವಿ ವಾಡಿದ್ದಾರೆ.

ತುಂಗಭದ್ರಾ - ಮೇಕೆದಾಟು

133 ಟಿಎಂಸಿ ಸಾಮರ್ಥ್ಯದ ತುಂಗಭದ್ರಾ ಜಲಾಶಯದಲ್ಲಿ 28 ಟಿಎಂಸಿ ಅಡಿಗಳಷ್ಟು ಹೂಳು ತುಂಬಿದೆ. ಹೂಳೆತ್ತುವ ಯೋಜನೆಯನ್ನು ರಾಷ್ಟ್ರೀಯ ಕಾರ್ಯಕ್ರಮವಾಗಿ ಜಾರಿಗೊಳಿಸಿದರೆ 1015 ಟಿಎಂಸಿ ನೀರನ್ನು ಸಂಗ್ರಹಿಸಬಹುದು. ಈ ಹೆಚ್ಚುವರಿ ನೀರನ್ನು ಬಯಲುಸೀಮೆ ಭಾಗಕ್ಕೆ ಪೂರೈಸಬಹುದು. ಹಾಗೆಯೇ ಮೇಕೆದಾಟು ಯೋಜನೆಯನ್ನು ಶ್ರೀ ಪೂರ್ಣಗೊಳಿಸಿದರೆ ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾವಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ನೀರು ದೊರೆಯಲಿದೆ. ಇನ್ನು ಅಟಲ್ ಭೂಜಲ ಯೋಜನೆಯಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳನ್ನು ತುಂಬಿಸಲು 200 ಕೋಟಿ ರೂ. ಅನುದಾನ ನೀಡಬೇಕೆಂದು ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net