29ರಿಂದ ಭದ್ರಾ ಮೇಲ್ದಂಡೆ ಕಾಲುವೆಗೆ ನೀರು

download
Published on

ಶಿವಮೊಗ್ಗ: ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಗೆ ಡಿ.29ರಿಂದ ನೀರು ಹರಿಸಲಿದ್ದು, ಕಾಲುವೆ ಪಾತ್ರದ ಸಾರ್ವಜನಿಕರು ಎಚ್ಚರಕೆ ವಹಿಸುವಂತೆ ಸೂಚಿಸಲಾಗಿದೆ. ಭದ್ರಾ ಜಲಾಶಯದಿಂದ ತರೀಕೆರೆ ತಾಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ, ಅಜ್ಜಂಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗೆ ಸರ್ಕಾರದ ನಿರ್ದೇಶನದಂತೆ ಶಾಂತಿಪುರ ಪಂಪ್‌ಹೌಸ್-1, ಬೆಟ್ಟತಾವರೆಕೆರೆ ಪಂಪ್‌ಹೌಸ್-2 ಮೂಲಕ ನೀರನ್ನು ಹರಿಸಲಾಗುವುದು. ಈ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು ಕಾಲುವೆ ಹಾಗೂ ಹಳ್ಳದ ಪಾತ್ರಗಳಲ್ಲಿ ತಿರುಗಾಡುವುದು, ಜನ ಜÁನುವಾರುಗಳನ್ನು ಕಾಲುವೆಗೆ ಬಿಡುವುದು ಹಾಗೂ ಇತರೆ ಚಟುವಟಿಕೆ ಮಾಡುವುದನ್ನು ನಿಷೇಽಸಲಾಗಿದೆ. ಸೂಚನೆ ಉಲ್ಲಂöಸಿ ನೀರಾವರಿ ಕಾಲುವೆಗಳನ್ನು ಜಖಂಗೊಳಿಸುವುದು, ಅನಽಕೃತವಾಗಿ ಪಂಪ್‌ಸೆಟ್‌ಗಳನ್ನು ಅಳವಡಿಸಿ ನೀರನ್ನು ಎತ್ತುವುದು ಕಾನೂರು ಬಾಹಿರವಾಗಿದ್ದು, ಅದನ್ನು ಉಲ್ಲಂöಸುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವುದಾಗಿ ಅಽಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net