ಕೆರೆ ತುಂಬಿಸಲು ಮಲಪ್ರಭಾ ಕಾಲುವೆಗೆ ನೀರು

9 Dwd 11 Divya
Published on

ಧಾರವಾಡ: ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ಮೇ ೧೪ರಿಂದ ೨೩ರವರೆಗೆ ನೀರು ಬಿಡಲಾಗುವುದು. ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲೂಕು ವ್ಯಾಪ್ತಿಯ ೫೮ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಽಕಾರದ ಅಧ್ಯಕ್ಷೆ ಹಾಗೂ ಜಿಲ್ಲಾಽಕಾರಿ ದಿವ್ಯ ಪ್ರಭು ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬರಗಾಲದ ನಡುವೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಜನ- ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದAತೆ ೧೦ ದಿನ ಮಲಪ್ರಭಾ ಬಲದಂಡೆ ಕಾಲುವೆಗಳಿಂದ ೦.೫ ಟಿಎಂಸಿ ನೀರನ್ನು ೪ ತಾಲೂಕುಗಳ ೫೮ ಕೆರೆಗಳಿಗೆ ಬಿಡಲಾಗುವುದು. ನವಲಗುಂದ ತಾಲೂಕಿನ ೩೭ ಕೆರೆ, ಅಣ್ಣಿಗೇರಿಯ ೧೩, ಹುಬ್ಬಳ್ಳಿಯ ೭ ಹಾಗೂ ಕುಂದಗೋಳದ ೩ ಪೂರಕ ಸಂಗ್ರಹಣಾ ಕೆರೆಗಳನ್ನು ಭರ್ತಿ ಮಾಡಲಾಗುವುದು. ಆಯಾ ತಹಸೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಽಕಾರಿ, ನೀರಾವರಿ ಇಲಾಖೆ ಅಽಕಾರಿಗಳು ನಿಗಾ ವಹಿಸಬೇಕು. ಕಾಲುವೆಗೆ ಹರಿಸಲಾದ ನೀರು ಕೇವಲ ಕುಡಿಯಲು ಮಾತ್ರ ಬಳಕೆಯಾಗಬೇಕು. ಬೇರೆ ಉದ್ದೇಶಕ್ಕೆ ಬಳಕೆಯಾಗದಂತೆ ಸಂಬAಽಸಿದ ಅಽಕಾರಿಗಳು ನಿಗಾ ವಹಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net