ನಾರಾಯಣಪುರ ಬಲದಂಡೆ ಕಾಲುವೆಗೆ ಇಂದಿನಿಂದ ನೀರು

Canal
Published on

ರಾಯಚೂರು: ಕೃಷ್ಣಾ ಮೇಲ್ದಂಡೆ ಯೋಜನೆ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆ ರಕ್ಷಣೆ ಹಾಗೂ ಮುಂಬರುವ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಬೇಡಿಕೆ ಪೂರೈಸಲು 2.25 ಟಿಎಂಸಿ ನೀರನ್ನು ನಾರಾಯಣಪುರ ಬಲದಂಡೆ ಮತ್ತು ಎಡದಂಡೆ ಕಾಲುವೆಗಳಿಗೆ ಹರಿಸಲು ತೀರ್ಮಾನಿಸಲಾಗಿದೆ.
ಜಿಲ್ಲೆಯ ಜನಪ್ರತಿನಿಗಳು ಮತ್ತು ರೈತ ಮುಖಂಡರ ಮನವಿ ಮೇರೆಗೆ ನಾರಾಯಣಪುರ ಜಲಾಶಯದ ಅಡಿಯಲ್ಲಿ ಬರುವ ಎಲ್ಲ ಅಕಾರಿಗಳೊಂದಿಗೆ ಚರ್ಚಿಸಿ ನಾರಾಯಣಪುರ ಮತ್ತು ಆಲಮಟ್ಟಿ ಜಲಾಶಯ ಒಳಗೊಂಡಂತೆ ಲಭ್ಯವಿರುವ 2.75 ಟಿಎಂಸಿ ನೀರನ್ನು ಮೆಣಸಿನಕಯಿ ಬೆಳೆ ಸಂರಕ್ಷಣೆಗಾಗಿ ಕಾಲುವೆಗೆ ಹರಿಸಲು ತೀರ್ಮಾನಿಸಲಾಗಿದೆ.
ಜ.12 ರಿಂದ 14ರವರೆಗೆ ಕಾಲುವೆಗೆ ನೀರು ಹರಿಸಲಾಗುತ್ತಿದ್ದು, ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆಗಳಿಗೆ ಮಾತ್ರ ನೀರು ಹರಿಸಲಾಗುತ್ತಿದೆ. ರೈತರು ನೀರನ್ನು ಸಮರ್ಪಕವಾಗಿ ಬಳಸಿಕೊಂಡು ಬೆಳೆಗಳನ್ನು ಉಳಿಸಿಕೊಳ್ಳಬೇಕು.
ಕಾಲುವೆ ಗೇಟುಗಳಿಗೆ ಹಾನಿ ಮಾಡುವುದು, ಎಸ್ಕೇಪ್‌ಗಳ ಮೂಲಕ ಹಳ್ಳಕ್ಕೆ ನೀರು ಹರಿಸುವುದು, ಪಂಪ್‌ಸೆಟ್‌ಗಳ ಮೂಲಕ ನೀರನ್ನು ಎತ್ತುವುದನ್ನು ನಿರ್ಬಂಸಲಾಗಿದೆ ಎಂದು ಕೃಷ್ಣಾ ಭಾಗ್ಯ ಜಲ ನಿಗಮದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net