ರಸ್ತೆ ಮೇಲೆ ನೀರು ನಿಂತು ಸಮಸ್ಯೆ

ರಸ್ತೆ ಮೇಲೆ ನೀರು ನಿಂತು ಸಮಸ್ಯೆ
Published on

ನಾಪೋಕ್ಲು: ನಾಪೋಕ್ಲು-ಕಕ್ಕಬ್ಬೆ, ವಿರಾಜಪೇಟೆ ಸಂಪರ್ಕಿಸುವ ಮುಖ್ಯರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ಅಧ್ವಾನಗೊಂಡಿದ್ದು ತೀವ್ರ ಸಮಸ್ಯೆ ಎದುರಾಗಿದೆ.

ಕಳೆದೆರಡು ದಿನಗಳಿಂದ ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ ಸುರಿಯುತ್ತಿದ್ದು, ಇಲ್ಲಿಗೆ ಸಮೀಪದ ಕೊಳಕೇರಿ ಎಂಬಲ್ಲಿ ರಸ್ತೆ ಮೇಲೆ ಮಳೆ ನೀರು ನಿಂತು ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸಮಸ್ಯೆ ಎದುರಾಗಿದೆ.

ಮಳೆ ಸುರಿದರೆ ರಸ್ತೆ ಮೇಲೆ ನೀರು ನಿಂತು ತಿರುಗಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಏರ್ಪಡುತ್ತದೆ. ಐದಾರು ವರ್ಷಗಳಿಂದ ಇದೇ ಸಮಸ್ಯೆ ಎದುರಾಗುತ್ತಿದ್ದು, ಸಂಬಂಧಪಟ್ಟವರು ಗಮನಹರಿಸುತ್ತಿಲ್ಲ ಎಂದು ಸ್ಥಳೀಯರಾದ ಹಮೀದ್, ಮಹಮ್ಮದ್ ಅಸಮಾಧಾನ ವ್ಯಕ್ತಪಡಿಸಿದರು. ಸಂಬಂಧಪಟ್ಟವರು ಗಮನ ಹರಿಸಿ ಶೀಘ್ರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net