ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ"ನಾವು ಮನುಜರು" ವಿನೂತನ ಕಾರ್ಯಕ್ರಮಕ್ಕೆ ಚಾಲನೆ

We are Humans innovative program launched in Kudumangaluru Government High School
Published on

ಕುಶಾಲನಗರ :

ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ( ಕೂಡ್ಲೂರು ) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ
ಶಿಕ್ಷಣ ಇಲಾಖೆಯ ವತಿಯಿಂದ ಶಾಲಾ ಮಕ್ಕಳ ಮನದಲ್ಲಿ ಸಾಮರಸ್ಯದ ಮೊಹರು ಬೆಳೆಸಲು ಪ್ರಸಕ್ತ ಸಾಲಿನಲ್ಲಿ ವಿನೂತನವಾಗಿ
ಆರಂಭಿಸಲಾಗಿರುವ ನಾವು ಮನುಜರು: ಕುರಿತ ವಿನೂತನ ಕಾರ್ಯಕ್ರಮವನ್ನು ಶಾಲೆಯ ಎಸ್. ಡಿ. ಎಂ. ಸಿ. ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ ಮಂಗಳವಾರ ಆರಂಭಿಸಲಾಯಿತು.
,ನಾವು ಮನುಜರು ಕಾರ್ಯಕ್ರಮದ ಉದ್ದೇಶ ಹಾಗೂ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿದರ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಮಕ್ಕಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ, ಪರಿಸರ ಪ್ರಜ್ಞೆ, ಮೌಢ್ಯಗಳ ನಿವಾರಣೆ ಬಗ್ಗೆ ಜಾಗೃತಿ ಸೇರಿದಂತೆ ಸಾಂವಿಧಾನಿಕ ಮೌಲ್ಯಗಳನ್ನು ಬೆಳೆಸಲು ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಮೂಲಕ ಶಾಲೆಗಳಲ್ಲಿ ಪ್ರಸಕ್ತ ಸಾಲಿನಿಂದ "ನಾವು ಮನುಜರು" ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಇದರಿಂದ ಮಕ್ಕಳಲ್ಲಿ ಸಾಮಾಜಿಕ ಸಾಮರಸ್ಯ, ಸಹಬಾಳ್ವೆ , ಸಾಂವಿಧಾನಿಕ ಮೌಲ್ಯ ಬೆಳೆಸಲು ಸಾಧ್ಯ ಎಂದರು.

ನಾವು ಮನುಜರು ಕಾರ್ಯಕ್ರಮದ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ರಂಗಭೂಮಿ ನಿರ್ದೇಶಕ
ಭರಮಣ್ಣ ಟಿ. ಬೆಟ್ಟಗೇರಿ ಮಾತನಾಡಿ,ನಾವು ಮನುಜರು ಕಾರ್ಯಕ್ರಮವು ಮಕ್ಕಳಲ್ಲಿ
ಸಾಮರಸ್ಯ ಬೆಳೆಸಲು ಸ್ಥಳೀಯ ಮತ್ತು ರಾಷ್ಟ್ರೀಯ ಹಬ್ಬಗಳು, ಆಟಗಳು, ಕ್ರೀಡೆಗಳು ಇತ್ಯಾದಿಗಳನ್ನು ಆಧರಿಸಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಾಮರಸ್ಯ ಬೆಳೆಸಲು ಮತ್ತು ಅದರ ಮಹತ್ವದ ಬಗ್ಗೆ ಚರ್ಚೆ, ಸಂವಾದ ನಡೆಸುವ ಮಹತ್ವದ ಕಾರ್ಯಕ್ರಮ ಇದಾಗಿದ್ದು, ಇದು ಮಕ್ಕಳ ಮನದಲ್ಲಿ ಸಾಮರಸ್ಯದ ಮೊಹರು ಒತ್ತಲು ಸಹಕಾರಿಯಾಗಿದೆ ಎಂದರು.

ಶಾಲೆಯ ಎಸ್ ಡಿ ಎಂ ಸಿ.ಅಧ್ಯಕ್ಷ ಎ.ಎಂ.ಜವರಯ್ಯ ಅಧ್ಯಕ್ಷತೆ ವಹಿಸಿದ್ದರು. ಎಸ್ ಡಿ ಎಂ ಸಿ.ಸದಸ್ಯರಾದ ಕೆ.ಪಿ.ರೇವಣ್ಣ, ಕೆಂಪು.ಎಸ್.ರಾಜಾಚಾರಿ, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಡಿ.ರಮ್ಯ, ಬಿ.ಎನ್.ಸುಜಾತ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ ಇದ್ದರು. ಪೋಷಕ ಪರಿಷತ್ತಿನ ಸದಸ್ಯರು ಹಾಗೂ ವಿದ್ಯಾರ್ಥಿ- ಪೋಷಕರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net