ಆತ್ಮಹತ್ಯೆಯ ಮಾಹಿತಿ ಕಲೆ ಹಾಕುತ್ತಿದ್ದೇವೆ

Screenshot_2024-11-11-19-53-25-62.jpg
Published on

ಬೆಳಗಾವಿ: ಬೆಳಗಾವಿ ತಹಸೀಲ್ದಾರ್ ಕಾರ್ಯಾಲಯದ ಎಸ್‌ಡಿಎ ರುದ್ರಣ್ಣ ಯಡವಣ್ಣವರ ಅತ್ಮಹತ್ಯೆಗೆ ಸಂಬಂಧಿಸಿದಂತೆ ಎಲ್ಲ ಮಾಹಿತಿ ಕಲೆ ಹಾಕಲಾಗುತ್ತಿದೆ. ರುದ್ರಣ್ಣನ ಮೊಬೈಲ್ ಸೀಜ್ ಮಾಡಿ ಎಫ್.ಎಸ್.ಎಲ್‌ಗೆ ಕಳುಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಇಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಟ್ಸ್ ಆ್ಯಪ್ ಗ್ರೂಪನಲ್ಲಿ ಏನೆಲ್ಲ ಚರ್ಚೆಯಾಗಿದೆ. ಯಾರೊಂದಿಗೆ ಮಾತನಾಡಿದ್ದಾರೆ ಎಂಬುವ ಮಾಹಿತಿ ಪಡೆಯಲಾಗುತ್ತಿದೆ. ಆರೋಪಿಗಳು ಪರಾರಿಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪತ್ತೆ ಹಚ್ಚುತ್ತಿದ್ದೇವೆ. ತನಿಖೆಯ ನಂತರವೇ ನಿಜವಾದ ಕಾರಣ ಬೆಳಕಿಗೆ ಬರಲಿದೆ ಎಂದರು. ಆರೋಪಿಗಳ ಬಂಧನಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಿಕೀಯ ವ್ಯಕ್ತಿಗಳಿಂದ ಒತ್ತಡಕ್ಕೊಳಗಾಗದೇ ಪೊಲೀಸ್ ಇಲಾಖೆ ತನ್ನ ಕಾರ್ಯ ಮಾಡುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net