ಯಾವ ಪಕ್ಷಕ್ಕೂ ನಮ್ಮ ಬೆಂಬಲವಿಲ್ಲ

4sgr1
ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ್ ಬಣ) ತಾಲೂಕು ಸಂಚಾಲಕ ನಟರಾಜ್ ಗೇರುಬೀಸ್ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.
Published on

ಸಾಗರ: ಲೋಕಸಭಾ ಚುನಾವಣೆಯಲ್ಲಿ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ್ ಬಣ) ಯಾವುದೇ ರಾಜಕೀಯ ಪಕ್ಷಕ್ಕೆ ಬೆಂಬಲ ನೀಡಿಲ್ಲ ಎಂದು ಸಮಿತಿ ತಾಲೂಕು ಸಂಚಾಲಕ ನಟರಾಜ್ ಗೇರುಬೀಸ್ ಹೇಳಿದರು.

ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ರಾಜ್ಯದ ಎಲ್ಲೆಡೆ ಯಾವ ಪಕ್ಷಕ್ಕೂ ಬೆಂಬಲ ನೀಡುತ್ತಿಲ್ಲ. ತಾಲೂಕಿನಲ್ಲಿಯೂ ನಮ್ಮ ಸಮಿತಿ ನಗರ, ಹೋಬಳಿ ಹಾಗೂ ಗ್ರಾಪಂ ಮಟ್ಟದಲ್ಲಿ ಶಾಖೆಗಳನ್ನು ಹೊಂದಿದೆ. ಸಮಿತಿ ಪದಾಧಿಕಾರಿಗಳು ತಮಗೆ ಇಷ್ಟವಾದ ಪಕ್ಷವನ್ನು ವೈಯಕ್ತಿಕವಾಗಿ ಬೆಂಬಲಿಸಿಕೊಂಡು ಹೋಗಲು ನಮ್ಮ ಅಭ್ಯಂತರವಿಲ್ಲ. ಆದರೆ ನಿಖರವಾದ ಪಕ್ಷವನ್ನು ಸಂಘಟನೆ ಹೆಸರಿನಲ್ಲಿ ಬೆಂಬಲಿಸಿ ಎಂದು ಹೇಳಲು ಅವಕಾಶವಿಲ್ಲ. ದಲಿತ ಸಮುದಾಯದ ಹಿತರಕ್ಷಣೆ ಮಾಡುವವರಿಗೆ ಸಮಿತಿ ಪಕ್ಷಾತೀತವಾಗಿ ಸಹಕಾರ ನೀಡುತ್ತದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮತದಾನ ನಮ್ಮೆಲ್ಲರ ಹಕ್ಕು. ಮತದಾನ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯವನ್ನು ನಾವು ಎತ್ತಿ ಹಿಡಿಯಬೇಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಈ ಮೂಲಕ ಅರ್ಹ ಅಭ್ಯರ್ಥಿಯನ್ನು ಲೋಕಸಭೆಗೆ ಕಳಿಸಬೇಕು ಎಂದು ಮನವಿ ಮಾಡಿದರು.
ಪ್ರಮುಖರಾದ ಗಂಗಾಧರ್, ಗಣಪತಿ ಇರುವಕ್ಕಿ, ನೂರು ಅಹ್ಮದ್, ನಾಗಭೂಷಣ್ ಎಚ್. ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net