ನಾವು ಯಾವುದೇ ತಪ್ಪು ಮಾಡಿಲ್ಲ

ಚಿಕ್ಕಬಳ್ಳಾಪುರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್​, ರಾಜ್ಯ ಬಿಜೆಪಿ ಸಂಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ.ರಾಜೇಶ್​, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ರಾಮಲಿಂಗಪ್ಪ ಮತ್ತಿತರರು ಇದ್ದರು.
Nanu Yavude Tappu Madilla
Published on

ತನಿಖೆಗೆ ಹೆದರಲ್ಲ ಎಂದ ಮಾಜಿ ಸಚಿವ ಡಾ.ಕೆ.ಸುಧಾಕರ್​

ವಿಜಯವಾಣಿ ಸುದ್ದಿಜಾಲ ಚಿಕ್ಕಬಳ್ಳಾಪುರ
ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಇದರ ಬಗೆಗಿನ ಯಾವುದೇ ವಿಚಾರಣೆ ನಡೆಸಿದರೂ ನಾವು ಹೆದರುವುದಿಲ್ಲ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್​ ಹೇಳಿದರು.
ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ೇತ್ರದಲ್ಲಿ ಬಿಜೆಪಿ ಬೆಂಬಲದೊಂದಿಗೆ ಆಯ್ಕೆಯಾದ ಗ್ರಾಪಂಗಳ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸನ್ಮಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ನಮ್ಮ ವಿರುದ್ಧ ಒಂದಲ್ಲ, ನಾಲ್ಕು ವಿಚಾರಣೆಗಳನ್ನು ನಡೆಸಿದರೂ ಹೆದರುವುದಿಲ್ಲ. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನಾವ್ಯಾರೂ ತಪ್ಪು ಮಾಡಿಲ್ಲ ಎಂಬುದನ್ನು ವಿಶ್ವಾಸದಿಂದ ಹೇಳುತ್ತಿದ್ದೇನೆ ಎಂದರು.
ಕರೊನಾ ಸಾಂಕ್ರಾಮಿಕ ಅವಧಿಯಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮುಂಜಾನೆಗೆ ಕರೆದು ಸಭೆ ನಡೆಸುತ್ತಿದ್ದರು. ಅದರಂತೆ ಸವಾಲನ್ನು ಎದುರಿಸಿ, ಸೋಂಕನ್ನು ನಿಯಂತ್ರಿಸಲಾಯಿತು. ನಮ್ಮ ಪ್ರಾಣವನ್ನು ಒತ್ತೆ ಇಟ್ಟು, ಜನರ ಪ್ರಾಣವನ್ನು ರಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್​ ನಾಯಕರು ಹೆಲ್ಮೆಟ್​, ಮಾಸ್ಕ್​ ಧರಿಸಿಕೊಂಡು, ನಮ್ಮ ಮನೆಗೆ ಪ್ರವೇಶವಿಲ್ಲ ಎಂಬ ಬೋರ್ಡು ಹಾಕಿಕೊಂಡು ಕುಳಿತಿದ್ದರು ಎಂದು ವ್ಯಂಗ್ಯವಾಡಿದರು.
ಬೇರೆ ಪಕ್ಷಕ್ಕೆ ಹೋಗುವ ಜಾಯಮಾನ ನನ್ನದಲ್ಲ. ಬಿಜೆಪಿಯಲ್ಲಿಯೇ ಇದ್ದು ಪಕ್ಷವನ್ನು ಕಟ್ಟಲಾಗುವುದು. ಈಗಿನ ಮುಖ್ಯಮಂತ್ರಿ, ಮಾಜಿ ಪ್ರಧಾನಿ ಇಂದಿರಾಗಾಂಧಿ ಕೂಡ ಸೋತಿದ್ದಾರೆ. ಸೋಲು ಉತ್ತಮ ಪಾಠ ಕಲಿಸುತ್ತದೆ. ಇದಕ್ಕೆ ಹೊಸ ವಿಶ್ವಾಸವನ್ನಿಟ್ಟುಕೊಂಡು ಮತ್ತೆ ಗೆಲ್ಲುವುದಾಗಿ ತಿಳಿಸಿದರು.
ಸರ್ಕಾರ ಯಾರಪ್ಪಂದೂ ಅಲ್ಲ. ತೆರಿಗೆ ಹಣ ಆರೂವರೆ ಕೋಟಿ ಜನರದ್ದು. ಯಾವುದೇ ಪಂಚಾಯಿತಿಗೆ ಅನುದಾನವನ್ನು ಖೋತಾ ಮಾಡಲು ಸಾಧ್ಯವಿಲ್ಲ. ಗ್ಯಾರಂಟಿ ಗಿಮಿಕ್​ 2 ಸಾವಿರ ರೂಪಾಯಿಗೆ ರಾಜ್ಯವನ್ನು ಮಾರುವ ಸ್ಥಿತಿ ಬಂದಿದೆ. ಕಾಂಗ್ರೆಸ್​ ಸರ್ಕಾರ ಈಗಲೇ 85 ಸಾವಿರ ಕೋಟಿ ರೂ. ಸಾಲ ಮಾಡಿದ್ದು, ಇನ್ನು ಐದು ವರ್ಷದಲ್ಲಿ 5 ಲಕ್ಷ ಕೋಟಿ ರೂ. ಸಾಲ ಆಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
ರಾಜ್ಯ ಬಿಜೆಪಿ ಸಂಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ.ರಾಜೇಶ್​ ಮಾತನಾಡಿ, ಕಾಂಗ್ರೆಸ್​ ಸರ್ಕಾರ ಗ್ಯಾರಂಟಿಗಳ ಮೂಲಕ ಒಂದು ಕುಟುಂಬಕ್ಕೆ ಸರಾಸರಿ 3 ಸಾವಿರ ರೂ. ನೀಡುತ್ತಿದೆ. ಆದರೆ ಗುತ್ತಿಗೆ ಹಾಗೂ ಇತರ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡು ಬಡ ಜನರಿಗೆ ಕೆಲಸವೇ ಸಿಗದಂತಾಗಿದೆ. ಒಂದು ಕಡೆಯಿಂದ ಗ್ಯಾರಂಟಿ ಭರವಸೆಯಲ್ಲಿ ತಿಂಗಳಿಗೆ ಕನಿಷ್ಠ 3500 ರೂ. ನೀಡಿ, ಮತ್ತೊಂದು ಕಡೆ ಕುಟುಂಬದ ಆದಾಯ ಕಿತ್ತುಕೊಳ್ಳಲಾಗುತ್ತಿದೆ ಎಂದು ದೂರಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ರಾಮಲಿಂಗಪ್ಪ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್​, ಬಿಎಂಟಿಸಿ ಮಾಜಿ ಉಪಾಧ್ಯಕ್ಷ ಕೆ.ವಿ.ನವೀನ್​ ಕಿರಣ್​, ಜಿಪಂ ಮಾಜಿ ಅಧ್ಯಕ್ಷ ಪಿ.ಎನ್​.ಕೇಶವರೆಡ್ಡಿ ಮತ್ತಿತರರು ಇದ್ದರು.


ಪ್ರತಿ ಹುದ್ದೆ ಸಹ ಸೇಲ್​
ರಾಜ್ಯ ಸರ್ಕಾರದಲ್ಲಿ ಪ್ರತಿ ಹುದ್ದೆಯೂ ಸೇಲ್​ ಆಗುತ್ತಿದ್ದು, ಎಲ್ಲಕ್ಕೂ ಕಮಿಷನ್​ ನಿಗದಿಯಾಗಿದೆ. ಪ್ರತಿ ಅಧಿಕಾರಿ ದುಡ್ಡು ಕೊಟ್ಟು ವರ್ಗಾವಣೆ ಮಾಡಿಕೊಳ್ಳಬೇಕಾಗಿದೆ. ಸ್ವಚ್ಛ ಆಡಳಿತ ಎಂದಿರುವ ಕಾಂಗ್ರೆಸ್​ ನಾಯಕರು ಇಡೀ ಆಡಳಿತವನ್ನೇ ಗುಡಿಸುತ್ತಿದ್ದಾರೆ. 135 ಶಾಸಕರು ಗೆದ್ದಿದ್ದರೂ ಬಿಜೆಪಿ ಮತ್ತು ಜೆಡಿಎಸ್​ ಶಾಸಕರನ್ನು ಸೆಳೆಯುವ ಯತ್ನ ನಡೆದಿದೆ. ಇನ್ನೂ ಐದು ವರ್ಷ ಆಡಳಿತ ನಡೆಸುವ ಗ್ಯಾರಂಟಿಯೇ ಇಲ್ಲವೇ? ಎಂದು ಡಾ.ಕೆ.ಸುಧಾಕರ್​ ಪ್ರಶ್ನೆ ಮಾಡಿದರು.

ರೈತರು ಪ್ರತಿಭಟಿಸಬೇಕಾಗಿತ್ತು
ರೈತರಿಗೆ ವರ್ಷಕ್ಕೆ 6 ಸಾವಿರ ರೂ. ನೀಡುವ ಕಿಸಾನ್​ ಸಮ್ಮಾನ್​ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದಾಗ ರಾಜ್ಯದಲ್ಲೂ 4 ಸಾವಿರ ರೂಪಾಯಿ ಸೇರಿಸಿ ನೀಡಲಾಯಿತು. ಆದರೆ, ರೈತರ ಉದ್ಧಾರದ ಭರವಸೆಯಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್​ ಮೊದಲಿಗೆ ನೆರವನ್ನು ರದ್ದುಗೊಳಿಸಿತು. ಈ ಭಾಗದಲ್ಲಿ ಹೈನುಗಾರಿಕೆಗೆ ಮತ್ತಷ್ಟು ಉತ್ತೇಜನ ನೀಡಲು ಚಿಮುಲ್​ ಒಕ್ಕೂಟ ರಚಿಸಲಾಯಿತು. ಇದಕ್ಕೂ ತಡೆಯೊಡ್ಡಲಾಗಿದೆ. ಇವನ್ನು ಸ್ವಾಭಿಮಾನಿ ರೈತರು ಪ್ರಶ್ನಿಸಿ, ಹೋರಾಟ ನಡೆಸಬೇಕಾಗಿತ್ತು. ಚಿಕ್ಕಬಳ್ಳಾಪುರಕ್ಕೆ ಕೊಡುಗೆಯಾಗಿ ಮೆಡಿಕಲ್​ ಕಾಲೇಜ್​ ಕೊಡಲಾಯಿತು. ಆದರೆ, ಗುತ್ತಿಗೆದಾರರಿಗೆ ಇನ್ನೂ ಬಿಲ್​ ಪಾವತಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ಮಾಜಿ ಸಚಿವರು ಕಿಡಿಕಾರಿದರು.

ಕಳ್ಳರೇ ಸಾಚಾಗಳಂತೆ ಓಡಾಡುತ್ತಿದ್ದಾರೆ
ರಾಜ್ಯ ಕಾಂಗ್ರೆಸ್​ ಸರ್ಕಾರದಲ್ಲಿ ಅನುದಾನವಿಲ್ಲದೇ ಅಭಿವೃದ್ಧಿ ಕುಂಠಿತಗೊಂಡಿದ್ದು, ಬೇರೆ ಕೆಲಸವಿಲ್ಲದ ನಾಯಕರು ವಿಚಾರಣೆಗಾಗಿ ಸಮಿತಿ ರಚಿಸಿ, ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಅವರು ಸತ್ಯ ಹರಿಶ್ಚಂದ್ರರೇ ಆಗಿದ್ದರೆ, 2013ರಿಂದ ಇಲ್ಲಿಯವರೆಗಿನ ತನಿಖೆ ಕೈಗೊಳ್ಳಲಿ, ಆಗ ನೈತಿಕತೆ, ಪಾರದರ್ಶಕತೆ ಭಾವನೆಯನ್ನು ಪ್ರದರ್ಶಿಸಲಿದೆ. ಈ ಹಿಂದಿನ ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇದರ ವಿಚಾರಣೆಗೆ ಎದೆಗಾರಿಕೆ ಇಲ್ಲ ಎಂದ ಅವರು, ಈಗ ಎಷ್ಟೇ ವಿಚಾರಣಾ ಸಮಿತಿ ರಚಿಸಿದರೂ, ಅದನ್ನು ಎದುರಿಸುವ ತಾಕತ್ತು ಹಾಗೂ ಮನೋಸ್ಥೆರ್ಯ ಇದೆ. ಕಳ್ಳರೇ ಸಾಚಾಗಳಂತೆ ಓಡಾಡುತ್ತಿರುವಾಗ, ಸಾಚಾಗಳಾದ ನಾವ್ಯಾಕೆ ಹೆದರಬೇಕು? ಎಂದು ಸುಧಾಕರ್​ ಪ್ರಶ್ನಿಸಿದರು.


ಕರ್ನಾಟಕವು ಕಲ್ಯಾಣ ರಾಜ್ಯ ಎಂಬ ಹೆಸರು ಪಡೆದಿದೆ. ಆದರೆ ಗ್ಯಾರಂಟಿ ಭರವಸೆಗಳ ಮೂಲಕ ದಿವಾಳಿಯಾಗಿಸುತ್ತಿದ್ದು, ಗುತ್ತಿಗೆದಾರರಿಗೆ ಕೆಲಸವೇ ಇಲ್ಲದಂತಾಗಿದೆ. ಭ್ರಷ್ಟಾಚಾರ ರಹಿತ ಸರ್ಕಾರ ೂಷಣೆಯಲ್ಲಿ ಮೊದಲ ದಿನದಿಂದಲೇ ಭ್ರಷ್ಟಾಚಾರಯುತ ಸರ್ಕಾರ ಅಧಿಕಾರ ನಡೆಸುತ್ತಿದೆ.

ಡಾ.ಕೆ.ಸುಧಾಕರ್​, ಮಾಜಿ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net