

ಬೆಳಗಾವಿ: ಇಲ್ಲಿನ ಕೆಎಲ್‌ಇ ವಿ.ಕೆ.ದಂತ ವಿಜ್ಞಾನ ಸಂಸ್ಥೆಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ ಆಚರಿಸಲಾಯಿತು. ಜೆ.ಎನ್.ವೈದ್ಯಕೀಯ ಕಾಲೇಜಿನ ಮನೋವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಏಕ್ತಾ ಯಾದವ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಮಾದಕ ವಸ್ತುಗಳ ದುರುಪಯೋಗದ ಕುರಿತು ಉಪನ್ಯಾಸ ನೀಡಿದರು.
ಆರೋಗ್ಯಕರ ಮತ್ತು ಸುರಕ್ಷಿತ ಸಮಾಜಕ್ಕಾಗಿ ಮಾದಕ ವಸ್ತುಗಳ ಮುಕ್ತ ಜೀವನಶೈಲಿಗೆ ಬದ್ಧರಾಗಲು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ವಿರೋಧಿ ಪ್ರತಿಜ್ಞೆಯನ್ನು ಬೋಧಿಸಲಾಯಿತು. ಡಾ.ಅಂಜನಾ ಬಾಗೇವಾಡಿ, ಡಾ. ತೃಪ್ತಿ ಸಾಧುನವರ ಮತ್ತು ಸಿಬ್ಬಂದಿ, ಸದಸ್ಯರು, ವಿದ್ಯಾರ್ಥಿಗಳು ಇದ್ದರು.