ಬಾಲಕಾರ್ಮಿಕಮುಕ್ತ ಸಮಾಜಕ್ಕೆ ಶ್ರಮಿಸಬೇಕು: ಆಸೀಫ್​ ಸೇಠ

12 Jaggu 7
Published on

ಬೆಳಗಾವಿ: ಬಾಲಕಾರ್ಮಿಕ ವಿರೋಧಿ ದಿನ ಅರ್ಥಪೂರ್ಣ ಆಚರಣೆಗೆ ಬಾಲಕಾರ್ಮಿಕ ಕಾಯ್ದೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಕಾಯ್ದೆಗಳ ಬಗ್ಗೆ ಅರಿತು ಬಾಲಕಾರ್ಮಿಕಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಶಾಸಕ ಆಸೀಫ್​ ಸೇಠ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್​ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ಮಿಕರ ಪದ್ಧತಿ ವಿರೋಧಿ ದಿನಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳು ಶಾಲೆಯಿಂದ ವಂಚಿತರಾಗದಂತೆ ಸರ್ಕಾರಿ ಶಾಲೆಯಲ್ಲಿ ಕಡ್ಡಾಯ ಹಾಜರಾತಿ, ಉಚಿತ ಪುಸ್ತಕಗಳು ಸೇರಿ ಅಗತ್ಯ ಸೌಕರ್ಯ ನೀಡಲಾಗುತ್ತಿದೆ. ಬಾಲಕರು ದುಶ್ಚಟಗಳಿಗೆ ಬಲಿಯಾಗದಂತೆ ಶಿಕ್ಷಕರು, ಪಾಲಕರು ನಿರಂತರ ತಿಳಿಹೇಳಬೇಕು ಎಂದರು.

ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ಸಮಾಜದ ಅತೀ ದೊಡ್ಡ ಪಿಡುಗು. 6ರಿಂದ 14 ವರ್ಷದ ಮಕ್ಕಳನ್ನು ವ್ಯಾಪಾರ, ಉದ್ಯಮ, ಅಂಗಡಿಗಳಲ್ಲಿ ಕೆಲಸಕ್ಕೆ ತೊಡಗಿಸಿಕೊಂಡವರಿಗೆ ಶಿೆ ವಿಧಿಸಲಾಗುವುದು ಎಂದರು.

ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಮಾತನಾಡಿದರು. ಉಪ ಕಾರ್ಮಿಕ ಆಯುಕ್ತ ಅಮರೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು.

ರಕ್ಷಣೆಗೊಂಡ ಬಾಲ ಕಾರ್ಮಿಕರಿಗೆ ಶಾಸಕ ಆಸೀಫ್​ ಸೇಠ ಶಾಲಾ ಪಠ್ಯ ಪುಸ್ತಕ ವಿತರಿಸಿದರು. ಮಕ್ಕಳ ರಕ್ಷಣೆ ಕುರಿತು ಪ್ರಮಾಣ ವಚನ ಸ್ವೀಕರಿಸಲಾಯಿತು. ಸೈಬರ್​, ಆರ್ಥಿಕ ಹಾಗೂ ಮಾದಕ ಅಪರಾಧಗಳ ಪೊಲೀಸ್​ ಠಾಣಾಧಿಕಾರಿ ವೀರೇಶ ದೊಡ್ಡಮನಿ, ಸಹಾಯಕ ಕಾರ್ಮಿಕ ಆಯುಕ್ತ ದೇವರಾಜ, ಜಿಲ್ಲಾ ಬಾಲ ಕಾರ್ಮಿಕರ ಯೋಜನೆ ಯೋಜನಾ ನಿರ್ದೇಶಕಿ ಜ್ಯೋತಿ ಕಾಂತೆ, ಕನ್ನಡ ಮತ್ತು ಸಂಸತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಜಿಲ್ಲಾ ಕಾರ್ಖಾನೆಗಳ ಉಪನಿರ್ದೇಶಕ ವೆಂಕಟೇಶ ರಾಠೋಡ, ಕಾರ್ಮಿಕ ಅಧಿಕಾರಿ ಮಲ್ಲಿಕಾರ್ಜುನ ಜೋಗುರು, ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ಇಲಾಖೆ ಸಿಬ್ಬಂದಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net