ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ಮಾಡಿಸುತ್ತೇವೆ, ಸಚಿವ ಸತೀಶ್ ಜಾರಕಿಹೊಳಿ

Screenshot_2023-08-27-23-18-38-03.jpg
Published on

ಬೆಳಗಾವಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ಮಾಡಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರೊನಾ ವೇಳೆ 10 ರೂ. ಮೌಲ್ಯದ ವಸ್ತುವನ್ನು 100 ರೂ., 100ರೂ. ವಸ್ತುವನ್ನು 1 ಸಾವಿರಕ್ಕೆ ಖರೀದಿಸಿದ್ದಾರೆ. ಮಿತಿಮೀರಿ ಅವ್ಯವಹಾರವಾಗಿದೆ. ಹಾಗಾಗಿ ತನಿಖೆ ಮಾಡುವುದು ಸೂಕ್ತ. ಇದರಿಂದ ಸತ್ಯ ಹೊರಬರಲಿದೆ ಎಂದರು.
ಮಾಜಿ ಸಚಿವ ಕೆ.ಸುಧಾಕರ್ ಕಾಂಗ್ರೆಸ್‌ಗೆ ಬಂದರೂ ತನಿಖೆಯಾಗುತ್ತಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರೇ ಕಾಂಗ್ರೆಸ್‌ಗೆ ಬಂದರೂ, ಬಾರದಿದ್ದರೂ ತನಿಖೆ ಆಗಲೇಬೇಕು ಎಂದು ಪ್ರತಿಕ್ರಿಯಿಸಿದರು.
ಕಳೆದ ಮೂರು ತಿಂಗಳಲ್ಲಿ ರಾಜ್ಯ ಸರ್ಕಾರ ಉತ್ತಮವಾಗಿ ಕೆಲಸ ಮಾಡಲು ಪ್ರಯತ್ನಿಸಿದೆ. ಸರ್ಕಾರ ಉತ್ತಮ ಪರ್ಫಾರ್ಮೆನ್ಸ್‌ ನೀಡಲು ಆರು ತಿಂಗಳಾದರೂ ಬೇಕು ಎಂದು ತಿಳಿಸಿದರು.
ಬೆಳಗಾವಿಯಲ್ಲಿ ನೈತಿಕ ಪೊಲೀಸ್‌ಗಿರಿ ನಡೆಯುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ರೀತಿಯ ಘಟನೆಗಳಿಗೆ ಬೆಳಗಾವಿ ಮತ್ತು ರಾಜ್ಯದಲ್ಲಿ ಅವಕಾಶ ಕೊಡುವುದಿಲ್ಲ. ಇಂತಹ ಪ್ರಕರಣ ಗಮನಕ್ಕೆ ಬಂದರೆ, ಪೊಲೀಸರು ಗಂಭೀರವಾಗಿ ಕ್ರಮ ಕೈಗೊಳ್ಳುತ್ತಾರೆ ಎಂದರು.
ಲೋಕಸಭೆ ಚುನಾವಣೆಗೆ ಜಾರಕಿಹೊಳಿ ಕುಟುಂಬದಿಂದ ಯಾರಾದರೂ ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆಗೆ, ‘ಸದ್ಯಕ್ಕೆ ಇಲ್ಲ. ಮುಂದೆ ನೋಡೋಣ. ಬಹಳಷ್ಟು ಆಕಾಂಕ್ಷಿಗಳಿದ್ದಾರೆ. ಅವರೆಲ್ಲರೂ ಬಹಿರಂಗವಾಗಿ ಹೇಳಬೇಕು. ಆಮೇಲೆ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಚರ್ಚಿಸುತ್ತೇವೆ ಎಂದರು.
ನಮ್ಮಲ್ಲಿ ಕೋಲ್ಡ್ ವಾರ ಯಾವುದು ಇಲ್ಲ.
ನಾವೆಲ್ಲ ಒಂದಾಗಿದ್ದೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net