10 ಮಸೂದೆ ಮಂಡನೆಯಾಗಲಿದೆ

hk PATIL
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಬೆಳಗಾವಿಯಲ್ಲಿ ಡಿಸೆಂಬರ್ 4ರಿಂದ ಆರಂಭಗೊಳ್ಳುವ ಚಳಿಗಾಲದ ಅಧಿವೇಶನದಲ್ಲಿ 10 ಮಸೂದೆಗಳು ಮಂಡನೆಯಾಗಲಿವೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಅಧಿವೇಶನದಲ್ಲಿ ಬರಗಾಲ, ಉತ್ತರ ಕರ್ನಾಟಕ ಭಾಗದ ಪ್ರಮುಖ ಸಮಸ್ಯೆ, ಅಭಿವೃದ್ಧಿ ವಿಚಾರಗಳನ್ನು ಚರ್ಚೆ ನಡೆಸಲಾಗುವುದು ಎಂದರು.

ಬಹುತೇಕ ಸಮೀಕ್ಷೆಗಳು ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ. ಈ ಬೆಳವಣಿಗೆಯನ್ನು ನೋಡಿದರೆ ದೇಶದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಂಕೇತವಾಗಿದೆ. ಕಾಂಗ್ರೆಸ್ ಪಕ್ಷದತ್ತ ಜನರ ಒಲವು ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಅಂತ್ಯವಾಗಲಿದೆ. ಬಿಜೆಪಿ ಮನೆಗೆ ಹೋಗುವ ಕಾಲ ಬಂದಿದೆ ಎಂದು ಹೇಳಿದರು.

ಬಿಜೆಪಿಯವರು ಕರ್ನಾಟಕದಲ್ಲಿ 17 ಶಾಸಕರನ್ನು ಸೆಳೆದುಕೊಂಡು ಸರ್ಕಾರ ರಚಿಸಿದ್ದರು. ಈ ರೀತಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೊಡಲಿ ಪೆಟ್ಟು ಹಾಕಿದ್ದರಿಂದ ಬಿಜೆಪಿ ಇಂದು ಈ ಸ್ಥಿತಿಗೆ ಬಂದಿದೆ. ಬಿಜೆಪಿಯ ಈ ಎಲ್ಲ ದಂಧೆಗಳು ಮನೆಗೆ ಹೋಗುವ ಸಮಯದಲ್ಲಿ ನಡೆಯುವುದಿಲ್ಲ. ತೆಲಂಗಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೆಳೆಯಲು ಸಾಧ್ಯವಿಲ್ಲ ಎಂದರು.

ರಾಜ್ಯದ ನೂತನ ಪ್ರವಾಸೋದ್ಯಮ ಡಿಸೆಂಬರ್ ಅಂತ್ಯ ಅಥವಾ 2024ರ ಜನವರಿ ತಿಂಗಳಲ್ಲಿ ಜಾರಿಗೆ ಬರಲಿದೆ. ಈ ಕಾರಣಕ್ಕಾಗಿಯೇ

ನಾನು ರಾಜ್ಯದ ಬಹುತೇಕ ಕಡೆಗಳಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಪ್ರವಾಸದ ಅನುಭವ ಜತೆಗೆ ಹೊಸ ಪ್ರವಾಸೋದ್ಯಮ ನೀತಿ ಜಾರಿ ಮಾಡುವ ಉದ್ದೇಶವಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net