ರಾಜ್ಯದ ಆರ್ಥಿಕ ಸಮಸ್ಯೆ ನಿಭಾಯಿಸುತ್ತೇವೆ

muniyappa
Published on

ಹುಬ್ಬಳ್ಳಿ: ಗ್ಯಾರಂಟಿ ಯೋಜನೆಗಳ ಜಾರಿಗೆ 56 ಸಾವಿರ ಕೋಟಿ ರೂ. ಒದಗಿಸಲಾಗಿದೆ. ಇದರ ನಡುವೆಯೂ ರಾಜ್ಯದ ಆರ್ಥಿಕ ಸಮಸ್ಯೆಯನ್ನು ನಿಭಾಯಿಸುತ್ತೇವೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ. ಕೆ.ಎಚ್. ಮುನಿಯಪ್ಪ ಹೇಳಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕ ಸಮಸ್ಯೆ ನಿಭಾಯಿಸಬಹುದು ಎಂದು ಅರ್ಥ ಮಾಡಿಕೊಂಡೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಬರ ಪರಿಸ್ಥಿತಿಯನ್ನು ಸಹ ನಿಭಾಯಿಸುತ್ತೇವೆ ಎಂದರು.

ಆಗಸ್ಟ್ ತಿಂಗಳಲ್ಲಿ 97 ಲಕ್ಷ, ಸೆಪ್ಟೆಂಬರ್​ನಲ್ಲಿ 1.03 ಕೋಟಿ ಹಾಗೂ ಅಕ್ಟೋಬರ್​ನಲ್ಲಿ 1.08 ಕೋಟಿ ಪಡಿತರದಾರರ ಖಾತೆಗೆ ಅಕ್ಕಿ ಬದಲು ಹಣ ಜಮೆ ಮಾಡಲಾಗಿದೆ. ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ. ತೆಲಂಗಾಣ, ಆಂಧ್ರಪ್ರದೇಶ, ಛತ್ತಿಸಗಢ ರಾಜ್ಯಗಳಿಂದ ಅಕ್ಕಿ ಖರೀದಿಸಿ ವಿತರಿಸುವ ಪ್ರಯತ್ನ ಮುಂದುವರಿಸಿದ್ದೇವೆ. ಅವರಿಂದ ಸ್ಪಷ್ಟ ಉತ್ತರ ಬಂದಿಲ್ಲ. ಅವರ ಸಂಪರ್ಕದಲ್ಲಿ ಇದ್ದೇವೆ ಎಂದು ತಿಳಿಸಿದರು.

ಚುನಾವಣೆ ಹಿನ್ನೆಲೆಯಲ್ಲಿ ಹಾಗೂ ಬಿಜೆಪಿ ಸರ್ಕಾರದ ಅವಧಿಯ ಕೊನೆಯಲ್ಲಿ ಹೊಸದಾಗಿ ಪಡಿತರ ಕಾರ್ಡ್ ವಿತರಣೆಯಾಗಿರಲಿಲ್ಲ. ಹೊಸದಾಗಿ ಪಡಿತರ ಕಾರ್ಡ್​ಗೆ ಸಲ್ಲಿಕೆಯಾಗಿರುವ 2.95 ಲಕ್ಷ ಅರ್ಜಿಗಳನ್ನು ಇಂದಿನಿಂದ ಪರಿಶೀಲನೆ ನಡೆಸಿ ಹೊಸದಾಗಿ ಕಾರ್ಡ್ ಗಳನ್ನು ವಿತರಿಸಲು ಕ್ರಮ ಕೈಗೊಳ್ಳುತ್ತೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net