‘ನಾವು-ನೀವು’ ಬೃಹತ್ ಸಮಾವೇಶ 23ರಂದು

Published on

ದಾಂಡೇಲಿ: ಅಭಿವೃದ್ಧಿಯಲ್ಲಿ ಉತ್ತರ ಕನ್ನಡ ಜಿಲ್ಲೆ ಹಿಂದುಳಿದಿದ್ದು, ಚಿಂತನ ಮಂಥನ ನಡೆಸುವ ಸಲುವಾಗಿ ಸಮಾನ ಮನಸ್ಸಿನ ಸಂಘಟನೆ ವತಿಯಿಂದ ನಗರದಲ್ಲಿ ನ.23ರಂದು ನಾವು ನೀವು ಶೀರ್ಷಿಕೆಯಡಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಬಿ.ಎನ್. ವಾಸರೆ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಜಿಲ್ಲೆಯ ಅಭಿವೃದ್ಧಿ ಹಿನ್ನೆಲೆಯಲ್ಲಿ ಮುಂದೆ ಆಗಬೇಕಿರುವ ಕೆಲಸಗಳ ಬಗ್ಗೆ ಸಮಾವೇಶದಲ್ಲಿ ಹಕ್ಕೊತ್ತಾಯ ಮಂಡಿಸಲಾಗುವುದು. ಇದು ಯಾವುದೇ ರಾಜಕೀಯ ಪ್ರೇರಿತ ಅಥವಾ ರಾಜಕೀಯ ಪಕ್ಷದ ಬ್ಯಾನರ್ ಅಡಿ ನಡೆಯುವ ಸಮಾವೇಶವಲ್ಲ. ಪಕ್ಷಾತೀತವಾಗಿ ನಡೆಯುವ ಈ ಸಮಾವೇಶಕ್ಕೆ ಜಿಲ್ಲೆಯ ಸಚಿವರು, ಸಂಸದರು, ಶಾಸಕರು ಹಾಗೂ ಎಲ್ಲ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದರು.

ಸ್ವಾಗತ ಸಮಿತಿ ಅಧ್ಯಕ್ಷೆ ಯಮುನಾ ಗಾಂವಕರ ಮಾತನಾಡಿ, ಭೂ ಸುಧಾರಣೆಗಾಗಿ, ದುಡಿಯುವ ಕೈಗಳಿಗೆ ಉದ್ಯೋಗಾವಕಾಶ, ಜಿಲ್ಲೆಯಲ್ಲಿ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಬೇಕು ಎಂದು ಆಗ್ರಹಿಸಿದರು.

ಸಮಿತಿಯ ಗೌರವ ಸದಸ್ಯರಾದ ಕೀರ್ತಿ ಗಾಂವಕರ ಹಾಗೂ ಟಿ.ಎಸ್. ಬಾಲಮಣಿ ಮಾತನಾಡಿದರು. ಕೃಷ್ಣ ಪೂಜಾರಿ, ಸಲೀಂ ಸಯ್ಯದ್, ಡಿ .ಸ್ಯಾಮ್‌ಸನ್, ಆಫ್ರಿನ್ ಕಿತ್ತೂರ, ರತ್ನದೀಪಾ ಎನ್.ಎಂ., ಆಸಿಫ್ ಮುಜಾವರ, ಮೌಲಾಲಿ ಮುಲ್ಲಾ, ಝೇವಿಯರ್ ಫ್ರಾನ್ಸಿಸ್ ಮಸ್ಕರಿನಸ್ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net