ಮುಂಗಾರು ದುರ್ಬಲ ಹಿನ್ನೆಲೆ:ರಾಜ್ಯದ ಹಲವೆಡೆ 5 ದಿನ ಸಾಧಾರಣ ಮಳೆ

Rain
Published on

ಬೆಂಗಳೂರು: ಮುಂಗಾರು ದುರ್ಬಲ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಶಿವಮೊಗ್ಗದ ಆಗುಂಬೆ 60, ಉತ್ತರ ಕನ್ನಡದ ನಿಲ್ಕುಂದ 40, ಉಡುಪಿಯ ಸಿದ್ದಾಪುರ 30 ಮತ್ತು ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಗುರುವಾರ 30 ಮಿಮೀ ಮಳೆ ಬಿದ್ದಿದೆ. ಬೆಂಗಳೂರು ನಗರ, ಬೆಂ. ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮುಂದಿನ 5 ದಿನ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ,ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರ, ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ಆ.1ರಿಂದ ಆ.5ರವರೆಗೆ ಒಣಹವೆ ಮುಂದುವರಿಯಲಿದೆ. ಈ ಅವಧಿಯಲ್ಲಿ ಕೆಲ ಆಯ್ದ ಪ್ರದೇಶಗಳಲ್ಲಿ ಮಾತ್ರ ವರ್ಷಧಾರೆಯಾಗಲಿದೆ. ಅಲ್ಲದೆ, ರಾಜ್ಯದ ಕೆಲ ಪ್ರದೇಶಗಳಲ್ಲಿ ರಭಸವಾಗಿ ಗಾಳಿ ಬೀಸಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net