

ನೆಲಮಂಗಲ : ಜೀವ ಮತ್ತು ಜೀವನ ಅಮೂಲ್ಯವಾಗಿದ್ದು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ನಗರ ಸಚಾರಿ ಠಾಣೆ ಇನ್ಸ್ಪೆಕ್ಟರ್ ರವಿ ತಿಳಿಸಿದರು.
ಬೊಮ್ಮನಹಳ್ಳಿ ಬಳಿಯ ನಗರ ಸಂಚಾರಿ ಠಾಣೆ ಅವರಣದಲ್ಲಿ ಹೆಲ್ಮಟ್ ಧಾರಣೆ ಕುರಿತು ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಾಹನ ಸವಾರರು ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆಮೂಲಕ ಜೀವ ರಕ್ಷಣೆ ಮಾಡಿಕೊಳ್ಳಬೇಕು ಎಂದರು.
ದ್ವಿಚಕ್ರ ವಾಹನಗಳೇ ಹೆಚ್ಚು ಅಪಘಾತಕ್ಕೀಡಾಗುತ್ತವೆ. ಅಪಘಾತಗಳಲ್ಲಿ ಹೆಲ್ಮೆಟ್ ಧರಿಸದೆ ಸಾವನ್ನಪ್ಪಿರುವರ ಸಂಖ್ಯೆ ಹೇರಳ. ಹೆಲ್ಮೆಟ್ ಧರಿಸದಿದ್ದಾಗ ತಲೆಗೆ ತೀವ್ರ ಪೆಟ್ಟಾಗಿ ಸಾವು ಸಂಭವವಿದ್ದು, ನಿಮ್ಮ ಹಾಗೂ ಕುಟುಂಬಕ್ಕಾಗಿಯಾದರೂ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಎಂದರು.
ಸಂಚಾರಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ನಿಜಾರ್ ಅಹಮ್ಮದ್ ಮಾತನಾಡಿ, ಅಪಘಾತ ಸಂಭವಿಸಿದಾಗ ಕೈ, ಕಾಲುಗಳಿಗೆ ಗಂಭೀರ ಗಾಯವಾದರೂ ಪ್ರಾಣ ಉಳಿಯಬಹುದು. ಆದರೆ ತಲೆಗೆ ಪೆಟ್ಟು ಬಿದ್ದರೆ ಉಳಿಯುವುದು ಕಷ್ಟ. ದ್ವಿಚಕ್ರ ವಾಹನ ಸವಾರರು ಜಾಗೃತರಾಗಿ ಹೆಲ್ಮೆಟ್ ಧರಿಸಿ, ಸಂಚಾರ ನಿಯಮ ಪಾಲಿಸಬೇಕು ಎಂದರು.