ಸುರಕ್ಷಾ ಪರಿಕರಗಳನ್ನು ಧರಿಸಿ

ಬಳ್ಳಾರಿ ಮಹಾನಗರಪಾಲಿಕೆ ಸಭಾಂಗಣದಲ್ಲಿ ಪೌರಕಾರ್ಮಿಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಕಾರ್ಯದರ್ಶಿ ಚಂದ್ರಕಲಾ ಮಾತನಾಡಿದರು. ಪಾಲಿಕೆ ಆಯುಕ್ತ ಖಲೀಲ್ ಸಾಬ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಿದಾನಂದ, ಜಿಲ್ಲಾ ಸಫಾಯಿ ಕರ್ಮಚಾರಿ ವಿಭಾಗ ಸಮಿತಿ ಸದಸ್ಯ ಕಂದಕೂರು ರಾಮುಡು ಇದ್ದರು.

Published on

ಬಳ್ಳಾರಿ: ಪೌರ ಕಾರ್ಮಿಕರು ಸ್ವಚ್ಛತಾ ಕಾರ್ಯದ ವೇಳೆ ತಪ್ಪದೆ ಸುರಕ್ಷಾ ಪರಿಕರಗಳನ್ನು ಧರಿಸಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಕಾರ್ಯದರ್ಶಿ ಚಂದ್ರಕಲಾ ಹೇಳಿದರು.

ನಗರದ ಪಾಲಿಕೆ ಸಭಾಂಗಣದಲ್ಲಿ ಶುಕ್ರವಾರ ಪೌರ ಕಾರ್ಮಿಕರೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು ಸುರಕ್ಷತಾ ಪರಿಕರಗಳನ್ನು ಧರಿಸದೇ ಕೆಲಸ ಮಾಡುತ್ತಿರುವುದು ಕಂಡುಬಂದಿದೆ. ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಸುರಕ್ಷತಾ ಪರಿಕರಗಳನ್ನು ಧರಿಸಬೇಕು ಎಂದರು.

ಪೌರ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ಸಹಾಯಧನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್, ಸುಸಜ್ಜಿತ ವಿಶ್ರಾಂತಿ ಕೊಠಡಿ, ನಿವೇಶನ ಹಾಗೂ ವಸತಿ ಕಲ್ಪಿಸುವಂತೆ ಪೌರ ಕಾರ್ಮಿಕರು ಒತ್ತಾಯಿಸಿದರು. ಸರ್ಕಾರದೊಂದಿಗೆ ಚರ್ಚಿಸಿ ಸೌಲಭ್ಯ ಒದಗಿಸಲಾಗುವುದು ಎಂದು ಚಂದ್ರಕಲಾ ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net