Helmet ಹೆಲ್ಮೆಟ್, ಸೀಟ್‌ಬೆಲ್ಟ್ ಕಡ್ಡಾಯವಾಗಿ ಧರಿಸಿ

ರಸ್ತೆ ಸುರಕ್ಷತೆ (Helmet) ಹಾಗೂ ವಾಹನ ಸಂಚಾರ ನಿಯಮ ಪಾಲನೆ ಸಂಬಂಧಿಸಿದಂತೆ ಎಸಿ ಕಚೇರಿಯಲ್ಲಿ ಎಸಿ ಪಿ. ಶ್ರವಣಕುಮಾರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ತಹಸೀಲ್ದಾರ್ ಶ್ರೀಕೃಷ್ಣ ಕಾಮಕರ, ಬಿಇಒ ಉದಯ ನಾಯ್ಕ, ಪ್ರಾಚಾರ್ಯ ಎನ್.ಡಿ. ನಾಯ್ಕ, ಆರೋಗ್ಯಾಧಿಕಾರಿ ಡಾ. ಆಜ್ಞಾ ನಾಯಕ, ಎಇಇ ರಾಘವೇಂದ್ರ ಇತರರಿದ್ದರು.
ರಸ್ತೆ ಸುರಕ್ಷತೆ (Helmet) ಹಾಗೂ ವಾಹನ ಸಂಚಾರ ನಿಯಮ ಪಾಲನೆ ಸಂಬಂಧಿಸಿದಂತೆ ಎಸಿ ಕಚೇರಿಯಲ್ಲಿ ಎಸಿ ಪಿ. ಶ್ರವಣಕುಮಾರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ತಹಸೀಲ್ದಾರ್ ಶ್ರೀಕೃಷ್ಣ ಕಾಮಕರ, ಬಿಇಒ ಉದಯ ನಾಯ್ಕ, ಪ್ರಾಚಾರ್ಯ ಎನ್.ಡಿ. ನಾಯ್ಕ, ಆರೋಗ್ಯಾಧಿಕಾರಿ ಡಾ. ಆಜ್ಞಾ ನಾಯಕ, ಎಇಇ ರಾಘವೇಂದ್ರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಎಸಿ ಪಿ. ಶ್ರವಣಕುಮಾರ ಸೂಚನೆ
  • ರಸ್ತೆ ಸುರಕ್ಷತೆ, ವಾಹನ ಸಂಚಾರ ನಿಯಮ ಪಾಲನೆ ಸಭೆ
  • ರಸ್ತೆಯಲ್ಲಿ ಕೆಟ್ಟು ನಿಂತ ವಾಹನದ ಹಿಂದೆ-ಮುಂದೆ ರಿಫ್ಲೆಕ್ಟರ್ ಬ್ಯಾರಿಯರ್ ನಿಲ್ಲಿಸಿ
ಕುಮಟಾ: ದ್ವಿಚಕ್ರ ವಾಹನ ಸವಾರರು (Helmet) ಹೆಲ್ಮೆಟ್, 4 ಚಕ್ರದ ವಾಹನ ಸವಾರರು ಸೀಟ್‌ಬೆಲ್ಟ್ ಧರಿಸುತ್ತಿಲ್ಲ.
ಇದನ್ನು ಸೂಕ್ತ ರೀತಿಯಲ್ಲಿ ನಿಯಂತ್ರಿಸಿ ವಾಹನ ಸವಾರರು ಹಾಗೂ ಅಮಾಯಕ ಜನರ ಪ್ರಾಣಕ್ಕೆ ಅಪಾಯ ತಗ್ಗಿಸಬೇಕು ಎಂದು ಉಪವಿಭಾಗಾಧಿಕಾರಿ ಪಿ. ಶ್ರವಣಕುಮಾರ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಾಲೂಕಿನಲ್ಲಿ ರಸ್ತೆ ಸುರಕ್ಷತೆ ಹಾಗೂ ವಾಹನ ಸಂಚಾರ ನಿಯಮ ಪಾಲನೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಕರೆದಿದ್ದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲೂಕು ವ್ಯಾಪ್ತಿಯ ಪೆಟ್ರೋಲ್ ಬಂಕ್‌ಗಳಲ್ಲಿ ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ನೀಡಬೇಡಿ, ‘ಹೆಲ್ಮೆಟ್ ಧರಿಸಿದವರಿಗೆ ಮಾತ್ರ ಪೆಟ್ರೋಲ್’ ಎಂದು ಬಂಕ್‌ಗಳಲ್ಲಿ ಬ್ಯಾನರ್ ಹಾಕಬೇಕು ಎಂದು ಪೆಟ್ರೋಲ್ ಬಂಕ್ ಮಾಲೀಕರಿಗೆ ಸೂಚಿಸಿದರು.
ಪ್ರತಿಕ್ರಿಯಿಸಿದ ಬಂಕ್ ಮಾಲೀಕರು, ಇದರಿಂದ ಬಂಕ್ ನೌಕರರೊಂದಿಗೆ ಸಾರ್ವಜನಿಕರು ಘರ್ಷಣೆಗೆ ಇಳಿಯುವ ಸಾಧ್ಯತೆ ಇದೆ. ಈ ಬಗ್ಗೆ ಸೂಕ್ತ ಆದೇಶ ಹೊರಡಿಸಬೇಕು ಹಾಗೂ ಬಂಕ್ ನೌಕರರಿಗೆ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದರು.
ಪಟ್ಟಣದ ವಿವಿಧ ವೃತ್ತಗಳಲ್ಲಿ, ಹೆದ್ದಾರಿ ಕೂಡುವಲ್ಲಿ ಹಾಗೂ ಹೆದ್ದಾರಿಯಲ್ಲಿಯೂ ಮಾರ್ಗಕ್ಕೆ ವಿರುದ್ಧ ದಿಕ್ಕಿನಲ್ಲಿ ವಾಹನಗಳನ್ನು ಚಲಾಯಿಸಿಕೊಂಡು ಬರುತ್ತಾರೆ. ಇದು ಅಪಘಾತಗಳಿಗೆ ಕಾರಣವಾಗುತ್ತಿದೆ.
ಎಲ್ಲ ಸರ್ಕಾರಿ ನೌಕರರು, ಅರೆ ಸರ್ಕಾರಿ ನೌಕರರು ಕಡ್ಡಾಯವಾಗಿ ಸಂಚಾರಿ ನಿಯಮ ಪಾಲಿಸಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳು ಇತ್ತೀಚೆಗೆ ದ್ವಿಚಕ್ರ ವಾಹನಗಳನ್ನು ಓಡಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಕಾಲೇಜ್‌ಗಳ ಪ್ರಾಚಾರ್ಯರು, ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದ ಅವರು, ಕೂಡಲೇ ಎಲ್ಲ ಅನಧಿಕೃತ ಗೂಡಂಗಡಿ, ವ್ಯಾಪಾರ ತೆರವುಗೊಳಿಸಬೇಕು ಎಂದು ಸೂಚಿಸಿದರು.
ಗ್ರಾಮೀಣ ಸಾರಿಗೆ ಬಸ್ ಪದೇಪದೆ ರಸ್ತೆ ಮಧ್ಯೆ ಕೆಟ್ಟು ನಿಲ್ಲುತ್ತಿವೆ. ನಿಯಮದಂತೆ ರಸ್ತೆಯಲ್ಲಿ ಕೆಟ್ಟು ನಿಂತ ವಾಹನದ ಹಿಂದೆ-ಮುಂದೆ ರಿಫ್ಲೆಕ್ಟರ್ ಬ್ಯಾರಿಯರ್ ನಿಲ್ಲಿಸಬೇಕು.
ಪಟ್ಟಣದ ಹಲವು ವೃತ್ತಗಳಲ್ಲಿ ಅಳವಡಿಸಿದ ದೊಡ್ಡ ಬ್ಯಾನರ್ ತೆರವುಗೊಳಿಸುವುದು ಹಾಗೂ ಯಾವುದೇ ವೃತ್ತಕ್ಕೆ ಬ್ಯಾನರ್ ಅಳವಡಿಸಲು ಅನುಮತಿ ನೀಡಬಾರದು ಎಂದು ಸಭೆಯಲ್ಲಿ ಸೂಚಿಸಲಾಯಿತು.
ಗೋಕರ್ಣ ಪಿಎಸ್‌ಐ ಮಾತನಾಡಿ, ಮೊರಬಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇರುವ ಅಂಡರ್ ಪಾಸ್ ರಸ್ತೆಯಲ್ಲಿ ದೊಡ್ಡ ಗಾತ್ರದ ಜಲ್ಲಿ ಕಲ್ಲುಗಳನ್ನು ಹಾಕಿದ್ದರಿಂದ ಶಾಲಾ ಮಕ್ಕಳಿಗೆ ಸಮಸ್ಯೆಯಾಗಿ ಇದನ್ನು ತಪ್ಪಿಸಲು ಕಾಂಕ್ರೀಟ್ ಹಾಕುವ ಕೆಲಸವಾಗಬೇಕು ಎಂದು ತಿಳಿಸಿದರು.
ಈ ಬಗ್ಗೆ ಒಂದು ವಾರದೊಳಗೆ ಕ್ರಮಕೈಗೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಐಆರ್‌ಬಿ ಕಂಪನಿ ಅಧಿಕಾರಿಗಳಿಗೆ ಪಿ. ಶ್ರವಣಕುಮಾರ ಸೂಚಿಸಿದರು.
ತಹಸೀಲ್ದಾರ್ ಶ್ರೀಕೃಷ್ಣ ಕಾಮಕರ, ಬಿಇಒ ಉದಯ ನಾಯ್ಕ, ಪ್ರಾಚಾರ್ಯ ಎನ್.ಡಿ. ನಾಯ್ಕ, ಆರೋಗ್ಯಾಧಿಕಾರಿ ಡಾ. ಆಜ್ಞಾ ನಾಯಕ, ಎಇಇ ರಾಘವೇಂದ್ರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net