

ವಿಜಯವಾಣಿ ಸುದ್ದಿಜಾಲ ಧಾರವಾಡ
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಜಿಲ್ಲೆಯ ರೈತರಿಗೆ ಸರ್ಕಾರ ಘೋಷಿಸಿದೆ. ಹಸಿಮೆಣಸಿನಕಾಯಿ ಬೆಳೆಗೆ ಧಾರವಾಡ, ಅಮ್ಮಿನಬಾವಿ, ಗರಗ, ದುಮ್ಮವಾಡ ಹಾಗೂ ಛಬ್ಬಿ ಹೋಬಳಿಗಳ ಗ್ರಾಪಂಗಳು ಹಾಗೂ ಮಾವು ಬೆಳೆಗೆ ಅಮ್ಮಿನಭಾವಿ, ಧಾರವಾಡ, ಗರಗ, ಅಳ್ನಾವರ, ಹುಬ್ಬಳ್ಳಿ, ಛಬ್ಬಿ, ಕಲಘಟಗಿ, ತಬಕದ ಹೊನ್ನಳ್ಳಿ, ದುಮ್ಮವಾಡ, ಕುಂದಗೋಳ ಹಾಗೂ ಸಂಶಿ ಹೋಬಳಿಗಳ ಗ್ರಾಪಂಗಳನ್ನು ವಿಮೆ ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ.
ಧಾರವಾಡ ಜಿಲ್ಲೆಗೆ ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿ ಆಯ್ಕೆಯಾಗಿದ್ದು, ವಿಮೆ ಕಂತಿಗೆ ಸಂಬಂಧಿಸಿ ಹಸಿಮೆಣಸಿನಕಾಯಿ ಪ್ರತಿ ಹೆಕ್ಟೇರ್ ಬೆಳೆಗೆ 6,745 ರೂ., ಮಾವು ಪ್ರತಿ ಹೆಕ್ಟೇರ್ ಬೆಳೆಗೆ 4,000 ರೂ. ವಿಮೆ ಕಂತಿನ ಮೊತ್ತವನ್ನು ರೈತರು ಪಾವತಿಸಬೇಕು. ವಿಮಾ ಕಂತನ್ನು ಪಾವತಿಸಲು ಆ. 31 ಕೊನೇ ದಿನ. ಯೋಜನೆ ಅಡಿ ನೋಂದಾಯಿಸಿಕೊಳ್ಳಲು ರೈತರು ಫ್ರುಟ್ಸ್ ಐಡಿ ಕಡ್ಡಾಯವಾಗಿ ಹೊಂದಿರಬೇಕು.
ಯೋಜನೆಯ ಸದುಪಯೋಗ ಪಡೆಯಲು ರೈತರು ಹತ್ತಿರದ ಬ್ಯಾಂಕ್ಗಳು ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗೆ ಧಾರವಾಡ, ಹುಬ್ಬಳ್ಳಿ, ಕಲಘಟಗಿ ಹಾಗೂ ಕುಂದಗೊಳ ತಾಲೂಕುಗಳ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು, ಸ್ಥಳಿಯ ವಾಣಿಜ್ಯ, ಗ್ರಾಮೀಣ, ಸಹಕಾರಿ ಬ್ಯಾಂಕ್ ಮತ್ತು ಹತ್ತಿರದ ಬ್ಯಾಂಕ್ಗಳ ಅಧಿಕಾರಿಗಳನ್ನು ಹಾಗೂ ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿ ಸಂಪಕಿರ್ಸಬಹುದು ಎಂದು ಪ್ರಕಟಣೆ ತಿಳಿಸಿದೆ.