

ಮೈಸೂರು: ಕಾವೇರಿ ಕಣಿವೆಯ ಜಿಲ್ಲೆಗಳಲ್ಲಿ ಆ.31 ರಿಂದ ಸೆ.4ರವರೆಗೆ ಮೋಡ ಕವಿದ ವಾತಾವರಣ ಕಾಣಿಸಿಕೊಂಡು ತುಂತುರುವಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು ಜಿಲ್ಲೆಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ಮಂಡ್ಯದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ದೀರ್ಘಾವಧಿ ಹವಾಮಾನ ಮುನ್ಸೂಚನೆ ಪ್ರಕಾರ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ನಾಗನಹಳ್ಳಿಯ ಗ್ರಾಮೀಣ ಕೃಷಿ ಹವಾಮಾನ ಸೇವಾ ವಿಭಾಗದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಪಿ. ಪ್ರಕಾಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.